ನಾಚಿಗೆಯಿಂದ ತಲೆ ತಗ್ಗಿಸುವಂತಾಗಿದೆ: ಮೋದಿ

Update: 2016-10-19 04:22 GMT

ಲೂಧಿಯಾನಾ, ಅ.19: ದಲಿತರ ವಿರುದ್ಧ ದೇಶದ ಉದ್ದಗಲಕ್ಕೂ ಸರಣಿ ದೌರ್ಜನ್ಯ ನಡೆಯುತ್ತಿದ್ದರೂ ಬಾಯಿ ಬಿಡದ ಪ್ರಧಾನಿ ನರೇಂದ್ರ ಮೋದಿ ಕೊನೆಗೂ ’ದಲಿತರ ವಿರುದ್ಧ ದೌರ್ಜನ್ಯ ನಡೆದಾಗ ನಾಚಿಗೆಯಿಂದ ತಲೆ ತಗ್ಗಿಸುವಂತಾಗುತ್ತದೆ’ ಎಂದು ಹೇಳಿದ್ದಾರೆ.

ಪಂಜಾಬ್ ವಿಧಾನಸಭಾ ಚುನಾವಣೆಗೆ ಮೂರು ತಿಂಗಳು ಬಾಕಿ ಇರುವಂತೆ ಇರುವ ಹಿನ್ನೆಲೆಯಲ್ಲಿ ಮೋದಿಗೆ ಜ್ಞಾನೋದಯವಾಗಿದ್ದು, ಇಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ "ಇಂಥ ಸಾಮಾಜಿಕ ಪಿಡುಗುಗಳನ್ನು ತಡೆಯಲು ಹೆಚ್ಚಿನ ಪ್ರಯತ್ನ ಅಗತ್ಯ" ಎಂದು ಅಭಿಪ್ರಾಯಪಟ್ಟರು.

ಶೇಕಡ 32ರಷ್ಟು ದಲಿತ ಮತದಾರರು ಪಂಜಾಬ್‌ನಲ್ಲಿದ್ದು, ದೇಶದಲ್ಲೇ ಅತ್ಯಧಿಕ ದಲಿತ ಮತದಾರರು ಈ ರಾಜ್ಯದಲ್ಲಿದ್ದಾರೆ. ಕಳೆದ ವರ್ಷ ರಾಜ್ಯದಲ್ಲಿ ಇಬ್ಬರು ದಲಿತರು ಲಿಕ್ಕರ್ ಮಾಫಿಯಾಗೆ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಕಾಲಿದಳ- ಬಿಜೆಪಿ ಮೈತ್ರಿ ಸರಕಾರ ದಲಿತರ ವಿರುದ್ಧದ ದೌರ್ಜನ್ಯ ತಡೆಯುವಲ್ಲಿ ವಿಫಲವಾಗಿದೆ ಎಂದು ವಿರೋಧ ಪಕ್ಷಗಳು ಆಪಾದಿಸಿದ್ದವು. ಮೋದಿ ಹೇಳಿಕೆ ಉತ್ತರ ಪ್ರದೇಶ ಚುನಾವಣೆಯಲ್ಲೂ ಪ್ರತಿಧ್ವನಿಸುವ ನಿರೀಕ್ಷೆ ಇದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News