ನ. 21 ರಿಂದ ಡಿ. 2ವರೆಗೆ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲ ಅಧಿವೇಶನ

Update: 2016-10-19 09:23 GMT

ಬೆಂಗಳೂರು, ಅ.19:  ಬೆಳಗಾವಿಯಲ್ಲಿ ನವೆಂಬರ್ 21 ರಿಂದ ಡಿಸೆಂಬರ್ 2ವರೆಗೆ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಸುವ ಬಗ್ಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಸಚಿವ ಸಂಪುಟದ ಬಳಿಕ ಕಾನೂನು ಸಚಿವ ಟಿ.ಬಿ.ಜಯಚಂದ್ರ ಸುದ್ದಿಗಾರರಿಗೆ ಮಾಹಿತಿ ನೀಡಿದರು.
ಪಶುವೈದ್ಯಕೀಯ ಮತ್ತು ಜೈವಿಕ ಸಂಸ್ಥೆಯ ವಿಜ್ಞಾನಿಗಳಿಗೆ ಯುಜಿಜಿ ವೇತನ, ಬನವಾಸಿ ಅಭಿವೃದ್ಧಿಗಾಗಿ  ಸಿಎಂ ಅಧ್ಯಕ್ಷತೆಯಲ್ಲಿ ಬನವಾಸಿ ಪ್ರಾಧಿಕಾರ ರಚನೆ, ನಾಲ್ಕು ನ್ಯಾಯಾಧೀಶರ ಮನೆ ನಿರ್ಮಾಣ,ಮೈಸೂರು ಜಿಲ್ಲೆ ನಂಜನಗೂಡಿನ ಇಮ್ಮಾವು ಗ್ರಾಮ 100 ಎಕರೆಯಲ್ಲಿ ಅಂತಾರಾಷ್ಟ್ರೀಯ ಚಿತ್ರನಗರಿ ನಿರ್ಮಾಣ, ಶೃಂಗೇರಿ ಬಳಿ ಮಸಿಗೆ ಗ್ರಾಮ  ಐದು  ಎಕರೆ ಭೂಮಿಯಲ್ಲಿ ಕೆಎಸ್ಸಾರ್ಟಿಸಿ ಡಿಪೋ ನಿರ್ಮಾಣ ಮಾಡುವ ನಿರ್ಧಾರ ಕೈಗೊಳ್ಳಲಾಯಿತು.

 ದೇವಿಕಾರಾಣಿ ರೋರಿಚ್ ಪ್ರಾಧಿಕಾರದ ಸಿಇಓ ಆಗಿ ಜಿ.ಎಚ್. ಪುಟ್ಟಹಲಗಯ್ಯ ನೇಮಕ , ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆಯಡಿ ಬಿಜೆಪಿ ಸರ್ಕಾರ ಅವಧಿಯಲ್ಲಿ ಕೈಗೊಳ್ಳಲಾಗಿದ್ದ ಕಾಮಗಾರಿಗಳ ವಿಳಂಬ ಹಾಗೂ ಅಕ್ರಮಗಳ ಬಗ್ಗೆ  ಅಂತರ್ ಇಲಾಖೆ ಸಮಿತಿಯಿಂದ ತನಿಖೆ ನಡೆಸಲು ಸರ್ಕಾರ ತೀರ್ಮಾನಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News