×
Ad

ಮಂಗಳೂರು: ಆಲಂಕಾರಿಕ ಮೀನುಕೃಷಿ ತರಬೇತಿ

Update: 2016-10-19 23:51 IST

ಮಂಗಳೂರು, ಅ.19: ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅ.26ರಿಂದ 28ರವರೆಗೆ ಆಲಂಕಾರಿಕ ಮೀನುಕೃಷಿ ಕುರಿತು ಮೂರು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ರೈತ ಹಾಗೂ ರೈತ ಮಹಿಳೆಯರು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಹೆಸರುಗಳನ್ನು ದೂ.ಸಂ.: 0824-2431872/9008914009 ಮುಖಾಂತರ ನೋಂದಾಯಿಸಿಕೊಳ್ಳಬಹುದು.
ಮೊದಲು ನೋಂದಾಯಿಸಿಕೊಂಡ 20 ಮಂದಿಗೆ ಆದ್ಯತೆ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಶಿಬಿರಾರ್ಥಿಗಳಿಗೆ ಉಚಿತ ಊಟದ ವ್ಯವಸ್ಥೆ ಏರ್ಪಡಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News