ಕಾಲುಬಾಯಿ ರೋಗಕ್ಕೆ ಲಸಿಕೆ ಕಾರ್ಯಕ್ರಮ

Update: 2016-10-19 18:42 GMT

ಉಡುಪಿ, ಅ.19: ಕಾಲುಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ರೋಗ ನಿಯಂತ್ರಣಕ್ಕಾಗಿ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕಾಲುಬಾಯಿ ರೋಗ ನಿಯಂತ್ರಣ ಯೋಜನೆಯಡಿ 11ನೆ ಸುತ್ತಿನ ಲಸಿಕಾ ಕಾರ್ಯಕ್ರಮ ಅ.24ರಿಂದ ಒಂದು ತಿಂಗಳ ಅವಧಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಲಸಿಕೆಗೆ ಅರ್ಹವಿರುವ 2,35,000 ಜಾನುವಾರು ಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುವುದು. ಹೈನುಗಾರರು ಈ ಕಾರ್ಯಕ್ಕೆ ಸಂಪೂರ್ಣ ಸಹಕಾರ ನೀಡಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ. ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಲಸಿಕೆ ಹಾಕುವ ದಿನಾಂಕಗಳ ಬಗ್ಗೆ ಮಾಹಿತಿ ಯನ್ನು ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳು/ಹಾಲು ಉತ್ಪಾದಕರ ಸಹಕಾರಿ ಸಂಘಗಳು/ಗ್ರಾಪಂಗಳನ್ನು ಸಂಪರ್ಕಿಸಿ ಪಡೆಯಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News