ಹಿರಿಯಡಕ: ವಿದ್ಯಾರ್ಥಿಗಳಿಗೆ ಸಂದರ್ಶನ ಕೌಶಲ್ಯ ತರಬೇತಿ

Update: 2016-10-20 13:43 GMT

ಉಡುಪಿ, ಆ.20: ಹಿರಿಯಡಕದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮಾಹಿತಿ ಸಮಿತಿಯ ವತಿಯಿಂದ ಅಂತಿಮ ಪದವಿ ವಿದ್ಯಾರ್ಥಿಗಳಿಗಾಗಿ ಸಂದರ್ಶನ ಕೌಶಲ್ಯ ತರಬೇತಿ ಇತ್ತೀಚೆಗೆ ನಡೆಯಿತು.

ಮುಖ್ಯ ಅತಿಥಿಗಳಾಗಿ ಕೋಟೇಶ್ವರ ಕಾಳಾವರ ವರದರಾಜ ಶೆಟ್ಟಿ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಗೀತಾ ಎಂ. ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಆಧುನಿಕ ಜಗತ್ತಿನ ಸಂದರ್ಶನ ರೀತಿಯನ್ನು ವಿವರಿಸಿದರು. ಸ್ಪರ್ಧಾತ್ಮಕ ಜಗತ್ತಿನ ಅಗತ್ಯತೆಯ ಬಗ್ಗೆ ತಿಳಿಸಿದ ಅವರು ಆತ್ಮಸ್ಥೈರ್ಯ, ಶಿಸ್ತು, ಸಮಯಪಾಲನೆ ಹೇಗೆ ಸಂದರ್ಶನದ ಸಮಯ ದಲ್ಲಿ ಪೂರಕವಾಗಿರುತ್ತದೆ ಎಂಬುದನ್ನು ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಸೋಜನ್ ಕೆ.ಜಿ. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಿಸಿದ ಉದ್ಯೋಗ ಮಾಹಿತಿ ಸಮಿತಿಯ ಸಂಚಾಲಕಿ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಸುಷ್ಮಾರಾವ್ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಪ್ರಮೀಳಾ ನಿರೂಪಿಸಿದರೆ, ಸುಪ್ರೀಯಾ ವಂದಿಸಿದರು. ವೇದಿಕೆಯಲ್ಲಿ ವಿದ್ಯಾರ್ಥಿ ನಾಯಕರಾದ ಪುನೀತ್ ಹಾಗೂ ಸ್ವಾತಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News