ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ

Update: 2016-10-21 05:12 GMT

ಕಾಸರಗೋಡು, ಅ.21: ಪತ್ನಿಯನ್ನು ಪತಿಯೇ ತಲೆಗೆ ಹೊಡೆದು ಬರ್ಬರವಾಗಿ ಕೊಲೆಗೈದ ಘಟನೆ ಕಾಲಿಚ್ಚಿನಡ್ಕ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ.
ಕಾಲಿಚ್ಚಿನಡ್ಕ ಕಾಲನಿಯ ನಾರಾಯಣಿ(42) ಕೊಲೆಗೀಡಾದವರು. ಕೃತ್ಯಕ್ಕೆ ಸಂಬಂಧಪಟ್ಟಂತೆ ನಾರಾಯಣಿಯ ಪತಿ ಅಂಬಾಡಿಯನ್ನು ಬೇಡಡ್ಕ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕೊಲೆ ಕೃತ್ಯವು ಮುಂಜಾನೆ ಕೃತ್ಯ ನಡೆಡಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬೆಳಗ್ಗೆ ಮಕ್ಕಳು ಎದ್ದಾಗ ತಾಯಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಇದನ್ನು ನೋಡಿ ಮಕ್ಕಳು ಬೊಬ್ಬೆ ಹಾಕಿದ್ದಾರೆ. ಮಕ್ಕಳ ಬೊಬ್ಬೆ ಕೇಳಿ ಸ್ಥಳೀಯರು ಧಾವಿಸಿ ಬಂದು ನೋಡಿದಾಗ ದಾರುಣ ಕೃತ್ಯ ಬೆಳಕಿಗೆ ಬಂದಿದೆ. ಬಳಿಕಪೊಲೀಸರಿಗೆ ಮಾಹಿತಿ ನೀಡಲಾಯಿತು. ಮನೆ ಪರಿಸರದಲ್ಲೇ ಇದ್ದ ಪೊಲೀಸರು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News