ಇಂದು ಬೆಂಗಳೂರಿಗೆ ಅಡ್ವಾಣಿ ಭೇಟಿ
Update: 2016-10-21 12:31 IST
ಬೆಂಗಳೂರು, ಅ.21: ಬಿಜೆಪಿ ಹಿರಿಯ ನಾಯಕ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಇಂದು ನಗರಕ್ಕೆ ಭೇಟಿ ನೀಡಲಿದ್ದಾರೆ. ಅಪರಾಹ್ನ 3 ಗಂಟೆಗೆ ಎಚ್.ಎ.ಎಲ್.ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಇತ್ತೀಚೆಗೆ ನಿಧನರಾದ ಆರೆಸ್ಸೆಸ್‌ನ ಹಿರಿಯ ಕಾರ್ಯಕರ್ತ ಗೋಪಿನಾಥ್‌ರ ಶ್ರೀರಾಮಪುರದಲ್ಲಿರುವ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ನಂತರ ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗಿ ಕೆಲ ಕಾಲ ಮಾತಕತೆ ನಡೆಸಿ ನಗರದ ಖಾಸಗಿ ಹೋಟೆಲ್ ನಲ್ಲಿ ತಂಗುವರು.
ನಾಳೆ ಬೆಳಗ್ಗೆ 9 ಗಂಟೆಗೆ ಎಚ್.ಎ.ಎಲ್ ನ ಹೆಲಿಕ್ಯಾಪ್ಟರ್ ಕಾರ್ಖಾನೆಗೆ ಅಡ್ವಾಣಿ ಭೇಟಿ ನೀಡಲಿದ್ದು, ಘಟಕವನ್ನು ವೀಕ್ಷಣೆ ಮಾಡಲಿದ್ದಾರೆ. ಬಳಿಕ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಸಂಜೆ 7ಕ್ಕೆ ವಾಪಸ್ ದಿಲ್ಲಿಗೆ ಹಿಂದಿರುಗಲಿದ್ದಾರೆ.