ವಿಜಯ ಬ್ಯಾಂಕ್ ಸಂಸ್ಥಾಪಕರ ದಿನಾಚರಣೆ; ರಕ್ತದಾನ ಶಿಬಿರ
ಬೆಂಗಳೂರು, ಅ.21: ರಾಷ್ಟ್ರೀಕೃತ ವಿಜಯಾಬ್ಯಾಂಕಿನ 86ನೇ ಸಂಸ್ಥಾಪಕರ ದಿನಾಚರಣೆಯ ಪ್ರಯುಕ್ತ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಘಟಕದ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವನ್ನು ಗುರುವಾರ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ರಕ್ತದಾನ ಶಿಬಿರವನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಉದ್ಘಾಟಸಿದರು. ತನ್ನ ಅವಧಿಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚಿನ ರಕ್ತದಾನ ಶಿಬಿರಗಳನ್ನು ಏರ್ಪಡಿಸಲಾಗಿದೆ ಎಂದರು. ಬೆಂಗಳೂರು ಹಾಗೂ ಇತರ 8 ರಕ್ತನಿಧಿ ಕೇಂದ್ರಗಳಲ್ಲಿ ಸುಮಾರು 1 ಲಕ್ಷಕ್ಕೂ ಮೇಲ್ಪಟ್ಟು ಯೂನಿಟ್ ರಕ್ತ ಸಂಗ್ರಹಣೆಯಾಗುತ್ತಿದೆ ಎಂದರು.
ವಿಜಯ ಬ್ಯಾಂಕಿನ ಅಧ್ಯಕ್ಷ ಕಿಶೋರ್ ಎಂ. ಸಾನ್ಸಿ ಮಾತನಾಡಿ ಬ್ಯಾಂಕಿನ 86ನೇ ಸಂಸ್ಥಾಪಕರ ದಿನಾಚರಣೆಯನ್ನು ಇಡೀ ದೇಶದಾದ್ಯಂತ ಎಲ್ಲಾ ಶಾಖೆಗಳಲ್ಲಿ ಆಚರಿಸಲಾಗುತ್ತಿದ್ದು ಇತರ ಎಲ್ಲಾ ಕೇಂದ್ರಗಳಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಂಡು ಒಟ್ಟು 860 ಯೂನಿಟ್ ರಕ್ತವನ್ನು ಸಂಗ್ರಹಿಸಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆಗೆ ನೀಡಲು ನಿರ್ಧರಿಸಲಾಗಿದೆ ಎಂದರು
ಈ ಸಂಧರ್ದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಉಪಸಭಾಪತಿ ಅಪ್ಪರಾವ್ ಅಕ್ಕೋಣೆ, ಸಹಾಯಕ ಕಾರ್ಯದರ್ಶಿ ಪ್ರತಾಪಸಿಂಹ ಹಾಗೂ ಎಂ.ಎಸ್. ರಾಮರಾವ್, ಬ್ಯಾಂಕಿನ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಶಿಬಿರದಲ್ಲಿ 150ಕ್ಕೂ ಅಧಿಕ ಯೂನಿಟ್ ರಕ್ತ ಸಂಗ್ರಹಣೆಯಾಗಿದೆ ಎಂದು ತಿಳಿದುಬಂದಿದೆ