×
Ad

2.50ಕೋಟಿ ರೂ.ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Update: 2016-10-21 22:22 IST

ಹಿರಿಯಡ್ಕ, ಅ.21: ಬೈರಂಪಳ್ಳಿ ಗ್ರಾಪಂ ವ್ಯಾಪ್ತಿಯ ಲೋಕೋಪಯೋಗಿ ಇಲಾಖೆಯ ವತಿಯಿಂದ ನಡೆಯುವ ಸುಮಾರು 2.50ಕೋಟಿ ರೂ. ವೆಚ್ಚದಪೆರ್ಡೂರು-ಹರಿಕಂಡಿಗೆ-ದೊಂಡೆರಂಗಡಿ ಮುಖ್ಯರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ಇಂದು ಶಿಲಾನ್ಯಾಸ ನೆರವೇರಿಸಿದರು.

 ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇನ್ನೂ ಕೂಡ 3.ಕಿ.ಮೀ ರಸ್ತೆಯ ಕಾಮಗಾರಿ ಬಾಕಿ ಉಳಿದಿದ್ದು, ಅತಿ ಶೀಘ್ರವಾಗಿ ಈ ರಸ್ತೆಯ ಕಾಮ ಗಾರಿಯನ್ನು ನಡೆಸಲಾಗುವುದು. ಬೈರಂಪಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಈಗಾ ಗಲೇ ಹಲವಾರು ಅಭಿವೃದ್ದಿ ಕೆಲಸಗಳನ್ನು ಮಾಡಲಾಗಿದ್ದು ಈ ವರ್ಷದಲ್ಲಿ ಸುಮಾರು 10-15 ರಸ್ತೆಗಳನ್ನು ಮೇಲ್ದರ್ಜೆಗೆ ಎರಿಸಲು ಈಗಾಗಲೇ ಅನು ದಾನ ಬಿಡುಗಡೆ ಮಾಡಲಾಗಿದೆ. ಈ ಕಾಮಗಾರಿಯನ್ನು ಕೂಡ ಅತೀ ಶೀಘ್ರವಾಗಿ ನಡೆಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಪಂ ಸದಸ್ಯೆ ಚಂದ್ರಿಕಾ ಕೇಲ್ಕರ್, ಬೈರಂಪಳ್ಳಿ ಗ್ರಾಪಂ ಅಧ್ಯಕ್ಷ ಸದಾಶಿವ ಪೂಜಾರಿ, ಸದಸ್ಯರಾದ ಪ್ರದೀಪ ಶೆಟ್ಟಿ, ಇಂದಿರಾ ಕುಲಾಲ್, ಕಾಂಗ್ರೆಸ್ ಅಧ್ಯಕ್ಷ ಪ್ರವೀಣ ಪೂಜಾರಿ ಭೈರಂಪಳ್ಳಿ, ಉಡುಪಿ ತಹಶೀಲ್ದಾರ್ ಮಹೇಶ್ಚಂದ್ರ, ಬ್ರಹ್ಮಾವರ ವಿಶೇಷ ತಹಶೀಲ್ದಾರ್ ಪ್ರದೀಪ್ ಕುಮಾರ್ ಕುರುಡೆಕರ್, ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಶ್ರೀಧರ ಶೆಟಿ, ರಾಜು ಮಾಸ್ಟರ್, ಪ್ರಪುಲ್ಲಾ ಕುಲಾಲ್, ವಿನೋದ್ ಕುಮಾರ್ ಹಿರಿಯಡಕ, ಸೋಮಾನಾಥ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News