ಕುಡಿಯುವ ನೀರಿನ ಬವಣೆ ಪರಿಹರಿಸಲು ರೇವಣ್ಣ ಆಗ್ರಹ

Update: 2016-10-21 18:34 GMT

ಬೆಂಗಳೂರು, ಅ. 21: ತೀವ್ರ ಸ್ವರೂಪದ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಜ್ಯದ ಜನತೆ ಕುಡಿಯುವ ನೀರಿನ ಬವಣೆ ಎದುರಿಸುತ್ತಿದ್ದು, ನಾಲ್ಕೈದು ದಿನಗಳಲ್ಲಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳದಿದ್ದರೆ ಮುಖ್ಯ ಕಾರ್ಯದರ್ಶಿ ಕಚೇರಿ ಮುಂಭಾಗ ಧರಣಿ ನಡೆಸಲಾಗುವುದು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಎಚ್ಚರಿಸಿದ್ದಾರೆ.

ಶುಕ್ರವಾರ ವಿಧಾನಸೌಧದ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಯ ಏಳು ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಿ ರಾಜ್ಯ ಸರಕಾರ ಕೈತೊಳೆದುಕೊಂಡಿದೆ. ಆದರೆ, ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಬಿಡಿಗಾಸನ್ನೂ ಬಿಡುಗಡೆ ಮಾಡಿಲ್ಲ ಎಂದು ದೂರಿದರು.ಲ್ಲಾಧಿಕಾರಿಗಳ ಬಳಿ 8 ಕೋಟಿ ರೂ. ಅನುದಾನ ವಿದ್ದರೂ, ಕುಡಿಯುವ ನೀರಿಗೆ ಹಣ ಬಿಡುಗಡೆ ಮಾಡಿಲ್ಲ. ಈ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರೂ, ಯಾರೊಬ್ಬರೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಆದುದರಿಂದ ಬರ ಪೀಡಿತ ತಾಲೂಕುಗಳಿಗೆ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಸ್ಪತ್ರೆ ಸ್ಥಳಾಂತರಕ್ಕೆ ಆಕ್ಷೇಪ: ಹಾಸನ ನಗರದಲ್ಲಿ ಸ್ಥಾಪಿಸಿದ್ದ ಪಶು ವೈದ್ಯಕೀಯ ಪಾಲಿಕ್ಲಿನಿಕ್ ಅನ್ನು ಅರಕಲಗೂಡು ತಾಲೂಕಿಗೆ ಸ್ಥಳಾಂತರಿಸಲು ಮುಂದಾಗಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ ರೇವಣ್ಣ, ಪಶು ವೈದ್ಯಕೀಯ ಖಾತೆ ಸಚಿವರು ಹೊಸ ಆಸ್ಪತ್ರೆ ಮಂಜೂರು ಮಾಡಿಸಿಕೊಳ್ಳಬೇಕೆಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News