ಸಬ್ಸಿಡಿ ದರದಲ್ಲಿ ಸೀಮೆಎಣ್ಣೆ ವಿತರಣೆ
Update: 2016-10-22 23:30 IST
ಮಂಗಳೂರು, ಅ.22: ಕರ್ನಾಟಕ ಕರಾವಳಿ ಗಿಲ್‌ನೆಟ್ ಮತ್ತು ನಾಡದೋಣಿ ಮೀನುಗಾರರಿಗೆ ಸಬ್ಸಿಡಿ ದರದಲ್ಲಿ ಸೀಮೆಎಣ್ಣೆ ವಿತರಣೆಗೆ ಆದೇಶ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದು, ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ದ.ಕ. ಜಿಲ್ಲಾ ಗಿಲ್‌ನೆಟ್ ಮೀನುಗಾರರ ಸಂಘ ತಿಳಿಸಿದೆ. ಮುಖ್ಯಮಂತ್ರಿ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್, ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್ ಡಿಸೋಜಾ, ಎಲ್ಲ ವಿಧಾನಸಭಾ ಕ್ಷೇತ್ರಗಳ ಶಾಸಕರು, ಅಧಿಕಾರಿಗಳಿಗೆ ಸಂಘದ ಅಧ್ಯಕ್ಷ ಅಲಿಹಸನ್, ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರು ಪ್ರಕಟನೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ