×
Ad

ನ.8ರಿಂದ ಕನಕ ಸದ್ಭಾವನಾ ಜ್ಯೋತಿ ರಥಯಾತ್ರೆ

Update: 2016-10-22 23:31 IST

ಮಂಗಳೂರು,ಅ.22: ಕನಕ ಸದ್ಭಾವನಾ ಜ್ಯೋತಿ ರಥಯಾತ್ರೆ ಸಮಿತಿ ವತಿಯಿಂದ ಭಕ್ತ ಕನಕದಾಸರ 529ನೆ ಜಯಂತ್ಯುತ್ಸವದ ಅಂಗವಾಗಿ ನ.8ರಿಂದ ನ.17ರವರೆಗೆ ಕನಕದಾಸರ ಹುಟ್ಟೂರಾದ ಹಾವೇರಿ ಜಿಲ್ಲೆಯ ಬಾಡ ಗ್ರಾಮದಿಂದ ಉಡುಪಿಯವರೆಗೆ ಕನಕ ಸದ್ಭಾವನಾ ಜ್ಯೋತಿ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಹೇಳಿದರು.
 ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.8ರಂದು ಬೆಳಗ್ಗೆ 9:30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನ ಸಂಪಿಗೆಹಳ್ಳಿ ಬೀರೇಶ್ವರ ದೇವಸ್ಥಾನದಲ್ಲಿ ಭಕ್ತ ಕನಕದಾಸರ ಮೂರ್ತಿಗೆ ಮಾಲಾರ್ಪಣೆ ಮಾಡುವರು. ನ.9ರಂದು ಹಾವೇರಿ ಜಿಲ್ಲೆಯ ಪುಣ್ಯಕ್ಷೇತ್ರ ಕನಕದಾಸರ ಜನ್ಮ ಕ್ಷೇತ್ರ ಬಾಡ ಗ್ರಾಮದಲ್ಲಿ ಕನಕದಾಸರ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ರಥಯಾತ್ರೆ ಪ್ರಾರಂಭವಾಗಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪದಾಧಿಕಾರಿಗಳಾದ ಚಂದ್ರಶೇಖರ, ಕೃಷ್ಣ ವೌರ್ಯ, ಶಿವಾನಂದ, ಮಹೇಶ್, ಮಹಾನುಭಾವಿಮಠ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News