ಕಟೀಲು ದರೋಡೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
Update: 2016-10-23 23:56 IST
ಮಂಗಳೂರು, ಅ.23: ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನದ ಅರ್ಚಕ ವಾಸುದೇವ ಆಸ್ರಣ್ಣರ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿ ಪುತ್ತೂರಿನ ನೆಕ್ಕಿಲದ ನಿವಾಸಿ ಚಂದ್ರಹಾಸ(30) ಎಂಬವನನ್ನು ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ.
ಬಂಧಿತ ಆರೋಪಿ ದರೋಡೆಕೋರರ ತಂಡದ ಕಾರು ಚಾಲಕನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.