×
Ad

ಮಿಲಾಗ್ರಿಸ್ ಕಾಲೇಜು ಪ್ರಾಂಶುಪಾಲರ ಮೇಲಿನ ಹಲ್ಲೆಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಖಂಡನೆ

Update: 2016-10-24 16:42 IST

ಬೆಳ್ತಂಗಡಿ, ಅ.24: ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರ ಮೇಲೆ ನಡೆದ ಹಲ್ಲೆ ಖಂಡಿನೀಯವಾಗಿದ್ದು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮುಖಂಡ, ತಾಲೂಕು ಪಂಚಾಯತು ಸದಸ್ಯ ಜೋಯಲ್ ಮೆಂಡೋನ್ಸ ಒತ್ತಾಯಿಸಿದ್ದಾರೆ.

ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಪಿಯನ್ನು ಬಂಧಿಸಲು ಪೊಲೀಸರು ಅನಗತ್ಯ ವಿಳಂಬ ಮಾಡುತ್ತಿದ್ದು ನ್ಯಾಯಕ್ಕಾಗಿ ಕೆಥೋಲಿಕ್ ಸಭಾ ನೇತೃತ್ವದಲ್ಲಿ ನಡೆಯುವ ಹೋರಾಟಗಳಿಗೆ ಅಲ್ಪಸಂಖ್ಯಾತ ಮೋರ್ಚಾ ಸಂಪೂರ್ಣ ಬೆಂಬಲ ನೀಡುವುದಾಗಿ ಅವರು ತಿಳಿಸಿದರು.

ಗೋಷ್ಠಿಯಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಅರುಣ್ ಕ್ರಾಸ್ತಾ, ರೋಹನ್ ಡಿ ಸೋಜ, ಗಿಲ್ಬರ್ಟ್‌ ಲೋಬೋ, ಸೆಲೆಸ್ಟಿನ್ ಡಿಸೋಜ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News