ಕಾರು ಟಿಪ್ಪರ್ ಮಧ್ಯೆ ಢಿಕ್ಕಿ: ಓರ್ವನಿಗೆ ಗಾಯ
Update: 2016-10-24 18:24 IST
ಕಡಬ, ಅ.24: ರಿಟ್ಸ್ ಕಾರು ಹಾಗೂ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿ ಓರ್ವ ಗಾಯಗೊಂಡ ಘಟನೆ ಧರ್ಮಸ್ಥಳ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಇಚ್ಲಂಪಾಡಿ ಎಂಬಲ್ಲಿ ಸೋಮವಾರ ನಡೆದಿದೆ.
ಹುಬ್ಬಳ್ಳಿ ಮೂಲದ ಕುಟುಂಬ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಹುಬ್ಬಳಿಗೆ ಹಿಂತಿರುಗುತ್ತಿದ್ದ ವೇಳೆ ಇಚ್ಲಂಪಾಡಿ ಚರ್ಚ್ ಎದುರಿನ ತಿರುವಿನಲ್ಲಿ ಎದುರಿನಿಂದ ಬರುತ್ತಿದ್ದ ಟಿಪ್ಪರ್‌ಗೆ ಢಿಕ್ಕಿ ಹೊಡೆದಿದೆ. ಕಾರಿನಲ್ಲಿ 5 ಮಂದಿ ಪ್ರಯಾಣಿಕರಿದ್ದು ಆರ್.ವಿ.ತಡಹಾಲ್ ಎಂಬವರಿಗೆ ಗಾಯಗಳಾಗಿದ್ದು, ನೆಲ್ಯಾಡಿಯ ಅಶ್ವಿನಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಪುತ್ತೂರು ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.