×
Ad

ಕಿವೀಸ್ ವಿರುದ್ಧ ಏಕದಿನ ಸರಣಿ: ಟೀಮ್ ಇಂಡಿಯಾದಲ್ಲಿ ಬದಲಾವಣೆಯಿಲ್ಲ

Update: 2016-10-24 23:01 IST

ಹೊಸದಿಲ್ಲಿ, ಅ.24: ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯ ಕೊನೆಯ ಎರಡು ಪಂದ್ಯಗಳಲ್ಲಿ ಯಾವುದೇ ಬದಲಾವಣೆ ಮಾಡದಿರಲು ಟೀಮ್ ಇಂಡಿಯಾ ನಿರ್ಧರಿಸಿದೆ. ಆದರೆ, ಜ್ವರದಿಂದ ಸಂಪೂರ್ಣ ಚೇತರಿಸಿಕೊಳ್ಳಲು ವಿಫಲವಾಗಿರುವ ಸುರೇಶ್ ರೈನಾ ಸರಣಿಯಿಂದ ಹೊರಗುಳಿದಿದ್ದಾರೆ.

ನ್ಯೂಝಿಲೆಂಡ್ ವಿರುದ್ಧ ಐದು ಪಂದ್ಯಗಳ ಏಕದಿನ ಸರಣಿಯ ಉಳಿದ ಎರಡು ಪಂದ್ಯಗಳಲ್ಲಿ 14 ಸದಸ್ಯರ ತಂಡವನ್ನೇ ಉಳಿಸಿಕೊಳ್ಳಲು ಅಖಿಲ ಭಾರತ ಹಿರಿಯರ ಆಯ್ಕೆ ಸಮಿತಿ ನಿರ್ಧರಿಸಿದೆ. ಸುರೇಶ್ ರೈನಾ ಇನ್ನೂ ಸಂಪೂರ್ಣ ಫಿಟ್‌ನೆಸ್ ಪಡೆದಿಲ್ಲ. ಹೀಗಾಗಿ ಅವರು ಸರಣಿಯ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ಪ್ರಕಟನೆಯೊಂದರಲ್ಲಿ ತಿಳಿಸಿದೆ.

ಮೊಹಾಲಿಯಲ್ಲಿ ರವಿವಾರ ರಾತ್ರಿ ನಡೆದ ಮೂರನೆ ಏಕದಿನ ಪಂದ್ಯವನ್ನು ಜಯಿಸಿರುವ ಭಾರತ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

 ಸರಣಿಯ ಉಳಿದೆರಡು ಪಂದ್ಯಗಳು ರಾಂಚಿ(ಅ.26) ಹಾಗೂ ವಿಶಾಖಪಟ್ಟಣ(ಅ.29)ದಲ್ಲಿ ನಿಗದಿಯಾಗಿದೆ.

ಭಾರತ ತಂಡ: ಮಹೇಂದ್ರ ಸಿಂಗ್ ಧೋನಿ(ನಾಯಕ, ವಿಕೆಟ್‌ಕೀಪರ್), ರೋಹಿತ್ ಶರ್ಮ, ಅಜಿಂಕ್ಯ ರಹಾನೆ, ವಿರಾಟ್ ಕೊಹ್ಲಿ, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಜಯಂತ್ ಯಾದವ್, ಅಮಿತ್ ಮಿಶ್ರಾ, ಜಸ್‌ಪ್ರೀತ್ ಬುಮ್ರಾ, ಧವಳ್ ಕುಲಕರ್ಣಿ, ಉಮೇಶ್ ಯಾದವ್, ಮನ್‌ದೀಪ್ ಸಿಂಗ್, ಕೇದಾರ್ ಜಾಧವ್.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News