ಬಸ್-ಲಾರಿ ಮಧ್ಯೆ ಅಪಘಾತ: ಇಬ್ಬರು ಗಂಭೀರ
Update: 2016-10-25 16:49 IST
ಭಟ್ಕಳ, ಅ.25: ಸುಬ್ರಹ್ಮಣ್ಯದಿಂದ ಹುಬ್ಬಳ್ಳಿ ಮಾರ್ಗವಾಗಿ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಭಟ್ಕಳದಿಂದ ಮಂಗಳೂರು ಮಾರ್ಗವಾಗಿ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆ ತಾಲೂಕಿನ ಗೊರಟೆ ಕ್ರಾಸ್ ಬಳಿ ಸೋಮವಾರ ರಾತ್ರಿ ನಡೆದಿದೆ.
ಅಪಘಾತದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಉಪ್ಪುಂದ ಮೂಲದ ದಯಾನಂದ ಮತ್ತು ಮಲ್ಲಿಕಾರ್ಜುನ ಶಿವಗೌಡರ ಎನ್ನುವ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ 11 ಜನ ಪ್ರಯಾಣಿಕರು ಚಿಕ್ಕಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಬಳಿಕ ಲಾರಿ ಡ್ರೈವರ್ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.