‘ಪಿಂಗಾರ ರಾಜ್ಯೋತ್ಸವ ಪ್ರಶಸ್ತಿ’ಗೆ ಕಡಂದಲೆ ಸುರೇಶ್ ಎಸ್. ಭಂಡಾರಿ ಆಯ್ಕೆ
ಮಂಗಳೂರು, ಅ.26: 12ನೆ ವಾರ್ಷಿಕ ‘ಪಿಂಗಾರ ರಾಜ್ಯೋತ್ಸವ ಪ್ರಶಸ್ತಿ-2016’ಗೆ ಕಡಂದಲೆ ಸುರೇಶ್ ಎಸ್. ಭಂಡಾರಿ ಆಯ್ಕೆಯಾಗಿದ್ದಾರೆ ಎಂದು ಪ್ರಶಸ್ತಿ ಸಮಿತಿ ಸಂಚಾಲಕ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಾಯ್ ಕ್ಯಾಸ್ಟಲಿನೊ ತಿಳಿಸಿದ್ದಾರೆ.
ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ ಸಾಧಕರನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಈ ಬಾರಿಯ ಪ್ರಶಸ್ತಿಗೆ ಸಮಾಜ ಸೇವಕ, ಕೊಡುಗೈ ದಾನಿ, ಭಂಡಾರಿ (ಸವಿತಾ) ಸಮಾಜದ ಅಭಿವೃದ್ದಿಗೆ ಶ್ರಮಿಸಿದ ಕಡಂದಲೆ ಸುರೇಶ್ ಭಂಡಾರಿಯವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ನ.22ರಂದು ಪುರಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಶಸ್ತಿ ಸಮಿತಿ ಜಂಟಿ ಸಂಚಾಲಕ ಹರಿಕೃಷ್ಣ ಪುನರೂರು, ಜಂಟಿ ಸಂಯೋಜಕ ಎಲಿಯಾಸ್ ಫೆರ್ನಾಂಡಿಸ್, ಸದಸ್ಯಸಿ.ಜಿ. ಪಿಂಟೊ, ಕಾರ್ಯದರ್ಶಿ ರೇಮಂಡ್ ಡಿ’ಕುನ್ಹಾ ಉಪಸ್ಥಿತರಿದ್ದರು.