×
Ad

ಬದಲಾಗಲಿದೆ ಕಾಸರಗೋಡು ನಗರದ ರೂಪುರೇಷೆ

Update: 2016-10-26 17:43 IST

ಕಾಸರಗೋಡು, ಅ.26: ಸ್ಥಳಾವಕಾಶದ ಕೊರತೆ, ಅನಧಿಕೃತ ಪಾರ್ಕಿಂಗ್ ಹಾಗೂ ಜನದಟ್ಟಣೆಯಿಂದ ನಲುಗುತ್ತಿರುವ ಕಾಸರಗೋಡು ನಗರಕ್ಕೆ ಹೊಸ ಆಯಾಮವನ್ನು ನೀಡಲು ಕಾಸರಗೋಡು ನಗರಸಭೆ ಮತ್ತು ಪೊಲೀಸ್ ಇಲಾಖೆ ಮುಂದಾಗಿದೆ.

ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್‌ನ್ನು ತಡೆಗಟ್ಟಲು ಪೇ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ತರಲು ತೀರ್ಮಾನಿಸಲಾಗಿದೆ. ಅಲ್ಲದೆ, ಬೀದಿ ವ್ಯಾಪಾರಿಗಳನ್ನು ತೆರವು ಗೊಳಿಸಿ ಬದಲಿ ವ್ಯವಸ್ಥೆ ಕಲ್ಪಿಸಲು ನಗರಸಭೆ ಮುಂದಾಗಿದೆ. ಹೊಸ ಬಸ್‌ನಿಲ್ದಾಣ, ಹಳೆ ಬಸ್ ನಿಲ್ದಾಣ, ಕೆಎಸ್ಸಾರ್ಟಿಸಿ ಡಿಪೊ ಪರಿಸರ, ರೈಲ್ವೆ ನಿಲ್ದಾಣ ಪರಿಸರ, ಕರಂದಕ್ಕಾಡ್, ಬ್ಯಾಂಕ್ ರಸ್ತೆ ಮೊದಲಾದ ಕಡೆಗಳಲ್ಲಿ ಪೇ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ಬರಲಿದೆ.

ವಿದ್ಯಾನಗರ ಬಿ.ಸಿ. ರೋಡ್‌ನಿಂದ ರೈಲ್ವೆ ನಿಲ್ದಾಣದವರೆಗೆ, ಜಾಲ್ಸೂರು ಜಂಕ್ಷನ್‌ನಿಂದ ಕರಂದಕ್ಕಾಡ್ ವರೆಗೆ, ಕರಂದಕ್ಕಾಡ್‌ನಿಂದ ಹೊಸ ಬಸ್ ನಿಲ್ದಾಣದವರೆಗೆ ಈ ಹೊಸ ವ್ಯವಸ್ಥೆ ಜಾರಿಗೆ ಬರುವುದರೊಂದಿಗೆ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆಗೆ ಬ್ರೇಕ್ ಹಾಕಲು ನಗರಸಭೆ ಮತ್ತು ಪೊಲೀಸ್ ಇಲಾಖೆ ಸಜ್ಜಾಗಿದೆ. ಜೊತೆಗೆ ನಾಯಕ್ಸೃ್ ರಸ್ತೆಯಿಂದ ವನ್ ವೇ ಸಂಚಾರ ಆರಂಭಿಸಲು ನಿರ್ಧರಿಸಲಾಗಿದೆ.

ಪಾರ್ಕಿಂಗ್ ಮತ್ತು ಬೀದಿಬದಿ ವ್ಯಾಪಾರಿಗಳಿಗೆ ಸ್ಥಳ ಗುರುತಿಸುವ ನಿಟ್ಟಿನಲ್ಲಿ ವಿಶೇಷ ಸಭೆ ನಡೆಯಿತು. ನಗರಸಭಾಧ್ಯಕ್ಷೆ ಬೀಫಾತಿಮ ಇಬ್ರಾಹೀಂ , ಕಾಸರಗೋಡು ನಗರ ಠಾಣಾ ಸರ್ಕಲ್ ಇನ್‌ಸ್ಪೆಕ್ಟರ್ ಅಬ್ದುರ್ರಹೀಂ, ಸಾರಿಗೆ ಅಧಿಕಾರಿ ಎ.ಕೆ. ರಾಜೀವನ್, ವಿವಿಧ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು, ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುರ್ರಹ್ಮಾನ್ ಮೊದಲಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಅಧಿಕಾರಿಗಳು ನಗರದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.

ಹತ್ತು ದಿನಗಳೊಳಗೆ ನೂತನ ವ್ಯವಸ್ಥೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ನಗರಸಭೆ ಪ್ರಯತ್ನ ಆರಂಭಿಸಿದೆ. ಹೊಸ ಬಸ್ ನಿಲ್ದಾಣ, ಹಳೆ ಬಸ್ ನಿಲ್ದಾಣ, ಕೆಎಸ್ಸಾರ್ಟಿಸಿ ಡಿಪೊ ಪರಿಸರ, ರೈಲ್ವೆ ನಿಲ್ದಾಣ ಪರಿಸರ, ಕರಂದಕ್ಕಾಡ್, ಬ್ಯಾಂಕ್ ರಸ್ತೆ ಮೊದಲಾದ ಕಡೆಗಳಲ್ಲಿ ಪೇ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ಬರಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News