ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳು ವಶಕ್ಕೆ
Update: 2016-10-26 19:22 IST
ಬೆಳ್ತಂಗಡಿ, ಅ.26: ಧರ್ಮಸ್ಥಳ ಠಾಣಾ ವ್ಯಾಪ್ತಿಯ ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ಡಸ್ಟರ್ ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರು ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಚಿಕ್ಕಮಗಳೂರು ಕಡೆಯಿಂದ ಬೆಳ್ತಂಗಡಿ ಕಡೆಗೆ ಬುಧವಾರ ಮುಂಜಾನೆ ಕಾರಿನಲ್ಲಿ 4 ದನಗಳನ್ನು ಅಕ್ರಮವಾಗಿ ತರಲಾಗುತ್ತಿತ್ತು. ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಚೆಕ್‌ಪೋಸ್ಟ್ ಬಳಿ ವಾಹನವನ್ನು ತಡೆದು ನಿಲ್ಲಿಸಿದ್ದು, ಈ ವೇಳೆ ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ. 4 ದನಗಳು ಹಾಗೂ ಡಸ್ಟರ್ ಕಾರನ್ನು ವಶಕ್ಕೆ ಪಡೆದುಕೊಂಡಿದ್ದು ಪ್ರಕರಣ ದಾಖಲಾಗಿದೆ.