ಜಿಲ್ಲಾ ಕೇಂದ್ರಗಳಲ್ಲಿ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ: ಐವನ್ ಡಿಸೋಜಾ
ಶಿವಮೊಗ್ಗ, ಅ.26: ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಅಲ್ಪಸಂಖ್ಯಾತ ಸಮುದಾಯದವರಿಗೆ ನೀಡುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲು ಪ್ರತೀ ಜಿಲ್ಲಾ ಕೇಂದ್ರಗಳಲ್ಲಿ ಅಲ್ಪ ಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಹಾಗೂ ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ಪರಿಷತ್ ಉಪಾಧ್ಯಕ್ಷ ಐವನ್ ಡಿಸೋಜಾ ತಿಳಿಸಿದರು.
ಜಿಲ್ಲಾ ಪಂಚಾಯತ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವತಿಯಿಂದ ನಗರದ ಸೇಕ್ರೆಡ್ ಹಾರ್ಟ್ ಚರ್ಚ್ ಸಮುದಾಯ ಭವನದಲ್ಲಿ ಬುಧವಾರ ಆಯೋಜಿಸಿದ್ದ ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದವರಿಗೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ನೀಡಲಾಗುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೈಸ್ತ ಸಮುದಾಯದವರು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ವಿಶ್ವದಲ್ಲಿಯೇ ಮಹತ್ತರ ಸೇವೆ ಸಲ್ಲಿಸುತ್ತಿದ್ದಾರೆ. ಅಂತಹ ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಸರಕಾರ ಬದ್ಧವಾಗಿದ್ದು, ಆರ್ಥಿಕವಾಗಿ, ರಾಜಕೀಯ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಬಲಪಡಿಸಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
2016-17ನೆ ಸಾಲಿನ ಬಜೆಟ್‌ನಲ್ಲಿ ಸರಕಾರ 125 ಕೋಟಿ ರೂ. ಮೀಸಲಿರಿಸಿದೆ. ಅಧಿಕಾರಿಗಳು ಈ ಬಗ್ಗೆ ಸಮುದಾಯದವರಿಗೆ ಮಾಹಿತಿ ನೀಡಬೇಕು. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿರುವ ಕ್ರೈಸ್ತ ಸಮುದಾಯದವರ ಅಭಿವೃದ್ಧಿಗಾಗಿ ಪ್ರತ್ಯೇಕ ಕ್ರೈಸ್ತ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಫಾದರ್ ಗಿಲ್ಬರ್ಟ್ ಲೋಬೊ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀ.ನಾ.ಶ್ರೀನಿವಾಸ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಡಿ.ಧರ್ಮಪ್ಪ, ಪಾಲಿಕೆ ಸದಸ್ಯ ಸ್ವಾಮಿನಾಥನ್, ಪ್ರಮುಖರಾದ ಚಿನ್ನಪ್ಪ, ಅರ್.ಕೆ.ಸ್ವಾಮಿ, ಯೇಸುದಾಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕ್ರೈಸ್ತ ಸಮುದಾಯದವರು ಸರಕಾರದ ಯೋಜನೆ ಗಳನ್ನು ಉಪಯೋಗಿಸಿಕೊಳ್ಳು ವಲ್ಲಿ ಹಿಂದೆ ಬಿದ್ದಿದ್ದಾರೆ. ಕಳೆದ ವರ್ಷದ ಬಜೆಟ್‌ನಲ್ಲಿ ಸರಕಾರ ಮೀಸಲಿರಿಸಿದ್ದ 100 ಕೋಟಿ ರೂ.ನಲ್ಲಿ ಕೇವಲ 60 ಕೋಟಿ ರೂ. ಖರ್ಚು ಮಾಡಲಾಗಿದೆ. ಉಳಿದ 40 ಕೋಟಿ ರೂ. ವಾಪಸ್‌ಹೋಗಿದ್ದು, ಈ ಹಿನ್ನೆಲೆಯಲ್ಲಿ ಸೌಲಭ್ಯ ಹಾಗೂ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ಜಿಲ್ಲಾ ಮಟ್ಟದಲ್ಲಿ ಮಾಹಿತಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ ಎಂದು ಐವನ್ ತಿಳಿಸಿದರು.
ಕ್ರೈ
ಸ್ತ ಸಮುದಾಯದ ಸರ್ವಾಂ ಗೀಣ ಅಭಿವೃದ್ಧಿಗೆ ಈಗಿರುವ ಕ್ರೈಸ್ತ ಅಭಿವೃದ್ಧಿ ಪರಿಷತ್‌ನ್ನು ಕ್ರೈಸ್ತ ಅಭಿವೃದ್ಧಿಯಾಗಿ ಪರಿವರ್ತಿಸುವ ಅಗತ್ಯವಿದೆ. ಆಂಧ್ರ ಮತ್ತು ತಮಿಳು ನಾಡಿನಲ್ಲಿ ಪ್ರತ್ಯೇಕವಾಗಿ ನಿಗಮ ಸ್ಥಾಪಿಸಿರುವಂತೆ ರಾಜ್ಯದಲ್ಲೂ ಸ್ಥಾಪಿಸಿದರೆ ಕ್ರೈಸ್ತರಿಗೆ ಜೇರುಸಲೆಂ ಯಾತ್ರೆ ರೂಪಿಸಬಹುದು. ಅಲ್ಲದೆ, ಸಮುದಾಯವನ್ನು ಆರ್ಥಿಕವಾಗಿ, ರಾಜಕೀಯವಾಗಿ ಮುಂಚೂಣಿಗೆ ತರಬಹುದು.
<
ಐವನ್ ಡಿಸೋಜಾ ಮುಖ್ಯ ಸಚೇತಕ.