×
Ad

ವಿಕಲಚೇತನರಿಗೆ ಸಾಧನಾ ಸಲಕರಣೆ ವಿತರಣೆ

Update: 2016-10-27 17:58 IST

ಪುತ್ತೂರು, ಅ.27: ವಿಕಲಚೇತನರಿಗೆ ಅಗತ್ಯವಿರುವ ವಿವಿಧ ಸಾಧನಾ ಸಲಕರಣೆಗಳ ವಿತರಣಾ ಕಾರ್ಯಕ್ರಮ ಗುರುವಾರ ಪುತ್ತೂರು ತಾಲೂಕು ಪಂಚಾಯತ್‌ನಲ್ಲಿ ನಡೆಯಿತು. ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಮುಕುಂದ ಸಾಧನಾ ಸಲಕರಣೆ ವಿತರಣೆ ಮಾಡಿದರು.

ಕೇಂದ್ರ ಸರಕಾರದ ಅಧೀನದಲ್ಲಿರುವ ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೊರೇಶನ್ ಆಫ್ ಇಂಡಿಯಾದ ವತಿಯಿಂದ ರೂರಲ್ ಇಲೆಕ್ಟ್ರಿಫಿಕೇಶನ್ ಕಾರ್ಪೊರೇಶನ್ ಸಂಸ್ಥೆಯ ಸಹಯೋಗದಲ್ಲಿ ವಿತರಣಾ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ 28 ವೀಲ್‌ಚೇರ್, 11 ತಳ್ಳು ಬೈಸಿಕಲ್, 48 ಶ್ರವಣ ಸಾಧನ, 8 ವಾಕಿಂಗ್ ಸ್ಟಿಕ್ ಸೇರಿದಂತೆ ಒಟ್ಟು 99 ಸಾಧನಗಳನ್ನು ವಿಕಲಚೇತನರಿಗೆ ನೀಡಲಾಯಿತು.

ತಾ.ಪಂ. ಸದಸ್ಯ ರಾಧಾಕೃಷ್ಣ ಬೋರ್ಕರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಎಸ್., ಎಪಿಎಂಸಿ ಅಧ್ಯಕ್ಷ ಕೃಷ್ಣ ಶೆಟ್ಟಿ, ರೂರಲ್ ಇಲೆಕ್ಟ್ರಿಫಿಕೇಶನ್ ಕಾರ್ಪೊರೇಶನ್ ಸಂಸ್ಥೆಯ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಮೋನಿತ್ ಅಗರ್‌ವಾಲ್, ಮ್ಯಾನುಫ್ಯಾಕ್ಚರಿಂಗ್ ಕಾರ್ಪೊರೇಶನ್ ಆಫ್ ಇಂಡಿಯಾದ ಪ್ರವೀಣ್ ಮಿಶ್ರ, ಸ್ಮತಿ ಮಲಿಕ್, ವಿಕಲಚೇತನರ ಪುನರ್ವಸತಿ ತಾಲೂಕು ಕಾರ್ಯಕರ್ತ ನವೀನ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News