×
Ad

ಸಚಿವ ರಮಾನಾಥ ರೈ ಪ್ರವಾಸ

Update: 2016-10-27 23:29 IST

ಮಂಗಳೂರು, ಅ.27: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅ.28ರಂದು ದ.ಕ. ಜಿಲ್ಲಾ ಪ್ರವಾಸದಲ್ಲಿರುವರು.ಬೆಳಗ್ಗೆ 9:30ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೃಹತ್ ರಾಷ್ಟ್ರಧ್ವಜ ಉದ್ಘಾಟನೆ, 11ಕ್ಕೆ ಪಕ್ಷಿಕೆರೆಯ ಸಂತ ಜೂದರ ಚರ್ಚ್‌ನನೂತನ ಸಭಾಭವನದ ಉದ್ಘಾಟನೆ ಹಾಗೂ ಸಾಮೂಹಿಕ ವಿವಾಹ ಸಮಾರಂಭ, ಮಧ್ಯಾಹ್ನ 12ಕ್ಕೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಭಾರತೀಯ ಕೃತಕ ಅಂಗಾಂಗಳ ನಿಗಮ ಹಾಗೂ ಗ್ರಾಮೀಣ ವಿದ್ಯುದ್ದೀಕರಣ ನಿಗಮದ ಆಶ್ರಯದಲ್ಲಿ ವಿಕಲಚೇತನರಿಗೆ ಉಚಿತ ಸಾಧನಾ ಸಲಕರಣೆ ವಿತರಣೆ ಕಾರ್ಯಕ್ರಮ, ಸಂಜೆ 4:30ಕ್ಕೆ ಮಂಗಳೂರು ಪುರಭವನದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News