ಸಚಿವ ಪ್ರಮೋದ್ ಪ್ರವಾಸ
ಉಡುಪಿ, ಅ.27:ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅ.28ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಳಗ್ಗೆ 8:30ಕ್ಕೆ ಅಜ್ಜರಕಾಡು ಜಿಲ್ಲಾಸ್ಪತ್ರೆ ಆವರಣದ ಆಯುಷ್ ಕಚೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಉದ್ಘಾಟನೆ, 10ಕ್ಕೆ ಮೂಡುಬಿದಿರೆ ಆಳ್ವಾಸ್ ಎಜುಕೇಶನ್ ಫೌಂಡೇಷನ್‌ನ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ಅಖಿಲ ಭಾರತ ಅಂತರ ವಿವಿ ಪುರುಷರ ಮತ್ತು ಮಹಿಳೆಯರ ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್‌ನ ಸಮಾರೋಪ ಸಮಾರಂಭ, 10:30ಕ್ಕೆ ಅದಮಾರು ಪೂರ್ಣಪ್ರಜ್ಞ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದ ಉದ್ಘಾಟನೆ, ಅಪರಾಹ್ನ 12ಕ್ಕೆ ಉಡುಪಿ ತಾಪಂ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಜನಸಂಪರ್ಕ ಸಭೆಯ ಪೂರ್ವಭಾವಿ ಸಭೆ, 3ಕ್ಕೆ ಮಣಿಪಾಲ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಉಡುಪಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಬಯಲು ಬಹಿರ್ದೆಸೆ ಮುಕ್ತ ಗ್ರಾಪಂಗಳಿಗೆ ಅಭಿನಂದನಾ ಕಾರ್ಯಕ್ರಮ, ಸಂಜೆ 5ಕ್ಕೆ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ, 5:30ಕ್ಕೆ ಹಳೇ ಅಂಚೆ ಕಚೇರಿ ರಸ್ತೆಯಲ್ಲಿ ಲಾ-ಇನ್-ಆ್ಯಕ್ಷನ್ ನೂತನ ಕಚೇರಿ ಉದ್ಘಾಟನೆ.