ಅದಮಾರು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟ
ಪಡುಬಿದ್ರೆ, ಅ.28: ಕ್ರಿಕೆಟ್ ಸೋಮಾರಿಗಳ ಆಟವಾದರೆ ಕಬಡ್ಡಿ ಪಂದ್ಯವು ಆರೋಗ್ಯವಂತರ ಆಟ ಎಂದು ಉಡುಪಿ ಶ್ರೀಅದಮಾರು ಮಠದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು.
ಅವರು ಶುಕ್ರವಾರ ಬೆಳಿಗ್ಗೆ ಅದಮಾರು ಪೂರ್ಣ ಪ್ರಜ್ಞ ಕಾಲೇಜಿನಲ್ಲಿ ಪಿಯು ಶಿಕ್ಷಣ ಮಂಡಳಿ ಹಾಗೂ ಪೂರ್ಣಪ್ರಜ್ಞ ಕಾಲೇಜಿನ ಆಶ್ರಯದಲ್ಲಿ ಅದಮಾರು ಕಾಲೇಜು ಮೈದಾನದಲ್ಲಿ ಜಿಲ್ಲಾ ಮಟ್ಟದ ಹುಡುಗರ ಮತ್ತು ಹುಡುಗಿಯರ ಕಬಡ್ಡಿ ಪಂದ್ಯವನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಪೈ ಅಧ್ಯಕ್ಷತೆ ವಹಿಸಿದ್ದರು. ಡಿಡಿಪಿಐ ಬಿ.ಆರ್.ನಾಯಕ್, ಹಿರಿಯ ದೈಹಿಕ ಶಿಕ್ಷಣ ನಿರ್ದೇಶಕ ವಸಂತ ಶೆಟ್ಟಿ, ರಾಷ್ಟ್ರಮಟ್ಟದ ಅತ್ಲೆಟಿಕ್ ಶೈಲತಾ ಭಂಡಾರಿಯವರನ್ನು ಇದೇ ವೇಳೆ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಅಭಿನಂದಿಸಿದರು. ಜನಾರ್ದನ ಜನಕಲ್ಯಾಣ ಸಮಿತಿಯ ಅಧ್ಯಕ್ಷ ವೈ.ಉದಯ ಕೆ. ಶೆಟ್ಟಿ, ಹಳೆ ವಿದ್ಯಾರ್ಥಿ ಚಂದ್ರಹಾಸ ಶೆಟ್ಟಿ, ಜಿಪಂ ಸದಸ್ಯ ಶಶಿಕಾಂತ್ ಪಡುಬಿದ್ರೆ, ತಾಪಂ ಸದಸ್ಯ ಕೇಶವ ಮೊಯ್ಲಿ, ಎರ್ಮಾಳು ತೆಂಕ ಗ್ರಾಪಂ ಅಧ್ಯಕ್ಷೆ ಅರುಣಾಕುಮಾರಿ, ಶ್ರೀಧರ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶರತ್ ಶೆಟ್ಟಿ, ಅದಮಾರು ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸತೀಶ್ ರಾವ್, ಕನ್ನಡ ಮಾಧ್ಯಮ ಶಾಲೆಯ ಶ್ರೀಕಾಂತ್ ರಾವ್, ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.