ವಿಕಲಚೇತನರ ಸೌಲಭ್ಯದ ಬಗ್ಗೆ ಅರಿವು ಮೂಡಿಸಬೇಕಿದೆ: ಸಚಿವ ರೈ
ಮಂಗಳೂರು, ಅ.28: ವಿಕಲಚೇತನರಿಗೆ ಸಿಗುವ ಸೌಲಭ್ಯಗಳ ಬಗ್ಗೆ ವಿಕಲಚೇತನರ ಕುಟುಂಬದಲ್ಲಿ ಅರಿವು ಮೂಡಿಸುವಂತಹ ಕಾರ್ಯವಾಗಬೇಕಾಗಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ನಗರದ ವೆನ್ಲಾಕ್ ಆಸ್ಪತ್ರೆಯ ಲಯನ್ಸ್ ವಿಕಲಚೇತನರ ಕೇಂದ್ರದಲ್ಲಿ ಇಂದು ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನ್ಯುಫ್ಯಾಕ್ಚರಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ಮತ್ತು ರೂರಲ್ ಇಲೆಕ್ಟ್ರಿಫಿಕೇಶನ್ ಕಾರ್ಪೋರೇಶನ್ ಲಿಮಿಟೆಡ್ ಸಹಯೋಗದಲ್ಲಿ ವಿಕಲಚೇತನರಿಗೆ ಸಲಕರಣೆ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಜೆ.ಆರ್.ಲೋಬೊ ವಹಿಸಿದ್ದರು. ಕಾರ್ಯಕ್ರಮದಲ್ಲಿ ದ.ಕ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ ಸ್ಥಾಯಿ ಸಮಿತಿ ಸದಸ್ಯ ಶಾಹುಲ್ ಹಮೀದ್, ಎಎಸ್ಪಿ ವೇದಮೂರ್ತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್, ಆರ್ ಇ ಸಿ ಎಲ್ ನ ವಲಯ ಮುಖ್ಯಸ್ಥ ಪಿ.ಎಸ್ ಹರಿಹರಣ್, ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನ್ಯುಫ್ಯಾಕ್ಚರಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ವಲಯ ಮುಖ್ಯಸ್ಥ ಅನುಪಮ್ ಪ್ರಕಾಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಸುಂದರ್ ಪೂಜಾರಿ, ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿ ಶೋಭ ಪಿ. ಮತ್ತಿತರರು ಉಪಸ್ಥಿತರಿದ್ದರು.