ಸುಳ್ಯದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ
ಸುಳ್ಯ, ಅ.28: ಕೆ.ವಿ.ಜಿ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಆಶ್ರಯದಲ್ಲಿ ರಾಷ್ಟ್ರೀಯ ಆರ್ಯವೇದ ದಿನಾಚರಣೆ ಪ್ರಯುಕ್ತ ಜನಜಾಗೃತಿ ಜಾಥಾ ನಡೆಯಿತು.
ಸುಳ್ಯದ ಎಎಫ್‌ಐ, ಲಯನ್ಸ್ ಮತ್ತು ಲಯನೆಸ್ ಕ್ಲಬ್, ರೋಟರಿ ಕ್ಲಬ್, ರೋಟರಿ ಕ್ಲಬ್ ಸುಳ್ಯ ಸಿಟಿ ಮತ್ತು ಇನ್ನರ್‌ವೀಲ್ ಕ್ಲಬ್‌ಗಳ ಸಹಯೋಗದಲ್ಲಿ ಮಧುಮೇಹ ರೋಗ ತಡೆಕಟ್ಟುವಿಕೆ ಹಾಗೂ ನಿಯಂತ್ರಣಕ್ಕಾಗಿ ಆಯುರ್ವೇದ ವಿಚಾರವಾಗಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಸುಳ್ಯ ಶಾಸ್ತ್ರಿ ವೃತ್ತದಿಂದ ಆರಂಭಗೊಂಡ ಜಾಥಾ ಮುಖ್ಯ ರಸ್ತೆಯಲ್ಲಿ ಸಾಗಿ ಕೆವಿಜಿ ಆಯುರ್ವೇದಿಕ್ ಕಾಲೇಜಿನಲ್ಲಿ ಸಮಾಪನಗೊಂಡಿತು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನಿನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಜಾಥಾಕ್ಕೆ ಚಾಲನೆ ನೀಡಿದರು. ಕೆವಿಜಿ ಆಯುರ್ವೆದಿಕ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎಸ್.ಶೆಟ್ಟರ್, ಆಡಳಿತಾಧಿಕಾರಿ ಡಾ.ಡಿ.ವಿ.ಲೀಲಾಧರ್, ರೋಟರಿ ಕ್ಲಬ್ ಅಧ್ಯಕ್ಷ ಗಿರಿಜಾಶಂಕರ್ ತುದಿಯಡ್ಕ, ಲಯನ್ಸ್ ಕ್ಲಬ್‌ನ ಮಾಜಿ ರಾಜ್ಯಪಾಲ ಎಂ.ಬಿ.ಸದಾಶಿವ, ಜಯರಾಮ ದೇರಪ್ಪಜ್ಜನಮನೆ ಮೊದಲಾದವರಿದ್ದರು.