ವಡೋದರಾದಲ್ಲಿ ಪಟಾಕಿ ಅಂಗಡಿಗೆ ಬೆಂಕಿ ಬಿದ್ದು 8 ಸಾವು
Update: 2016-10-28 21:14 IST
ವಡೋದರಾ, ಅ.28: ವಘೊಡಿಯಾ ತಾಲೂಕಿನ ರುಸ್ತಂಪುರ ಗ್ರಾಮದ ಪಟಾಕಿ ಅಂಗಡಿಯೊಂದರಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಅಗ್ನಿ ದುರಂತದಲ್ಲಿ ಎಂಟು ಮಂದಿ ಮೃತಪಟ್ಟು , ಐವರು ಗಾಯಗೊಂಡಿದ್ದಾರೆ
ಪಟಾಕಿ ಅಂಗಡಿಗೆ ಹೊಂದಿಕೊಂಡಿದ್ದ ಇತರೆ ಎರಡು ಪಟಾಕಿ ಅಂಗಡಿಗಳು ಬೆಂಕಿಗಾಹುತಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ನಿಯಂತ್ರಿಸುವ ಮೂಲಕ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.ಜಿಲ್ಲಾಧಿಕಾರಿ ಲೋಚನ್ ಸೆಹ್ರಾ ಸ್ಥಳಕ್ಕೆ ಆಗಮಿಸಿದ್ದಾರೆ.