ಆಸ್ಪತ್ರೆ ಖಾಸಗೀಕರಣ ಖಂಡಿಸಿ ನಾಳೆ ಪ್ರತಿಭಟನೆ
Update: 2016-10-29 00:05 IST
ಉಡುಪಿ, ಅ.28: ಬಡ ರೋಗಿಗಳ ಆಶಾಕಿರಣವಾಗಿರುವ ಉಡುಪಿ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಖಾಸಗೀಕರಣಗೊಳಿಸುವ ರಾಜ್ಯ ಸರಕಾರ ಕ್ರಮವನ್ನು ಉಡುಪಿ ಜಿಲ್ಲಾ ಜೆಡಿಎಸ್ ಖಂಡಿಸಿದೆ.
ಅ.30ರಂದು ಶಂಕುಸ್ಥಾಪನೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಎದುರು ಕಪ್ಪು ಪಟ್ಟಿ ಧರಿಸಿ ವೌನ ಪ್ರತಿಭಟನೆ ನಡೆಸಲಾಗುವುದು. ಇದಕ್ಕೂ ಸರಕಾರ ಮಣಿಯದಿದ್ದರೆ ಮುಂದೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಜಿಲ್ಲಾಧ್ಯಕ್ಷ ದಕ್ಷತ್ ಆರ್.ಶೆಟ್ಟಿ, ಕಾರ್ಯಾಧ್ಯಕ್ಷ ವಾಸುದೇವ ರಾವ್, ವಕ್ತಾರ ವಿಶ್ವನಾಥ್ ಬೆಳಪು, ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.