ಪ್ರತಿ ಕ್ವಿಂಟಾಲ್‌ಗೆ ರೂ.ನಂತೆ ಈರುಳ್ಳಿ ಖರೀದಿ: ಜಯಚಂದ್ರ
ಬೆಂಗಳೂರು, ಅ. 28: ಈರುಳ್ಳಿ ಬೆಲೆ ತೀವ್ರ ಕುಸಿತದ ಹಿನ್ನೆಲೆಯಲ್ಲಿ ಮಾರುಕಟ್ಟೆ ಮಧ್ಯಪ್ರವೇಶಕ್ಕೆ ತೀರ್ಮಾನಿಸಿರುವ ರಾಜ್ಯ ಸರಕಾರ, ನ.3ರಿಂದ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಇಂದಿಲ್ಲಿ ಪ್ರಕಟಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತಿ ಕೆಜಿಗೆ 6.24 ರೂ.ನಂತೆ ದರ ನಿಗದಿಪಡಿಸಿದ್ದು, ಎಪಿಎಂಸಿಗಳ ಮೂಲಕ ಈರುಳ್ಳಿ ಖರೀದಿ ಮಾಡಲಾಗುವುದು. ಮಾರುಕಟ್ಟೆ ಮಧ್ಯ ಪ್ರವೇಶಿಸಲು ಆವರ್ತ ನಿಧಿಯಿಂದ ಈಗಾಗಲೇ 50ಕೋಟಿ ರೂ.ವನ್ನು ಬಿಡುಗಡೆ ಮಾಡಲಾಗಿದೆ ಎಂದರು.ರುಳ್ಳಿ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಮಾರುಕಟ್ಟೆ ಮಧ್ಯ ಪ್ರವೇಶಿಸಲು ಕೇಂದ್ರ ಸರಕಾರ ನಿರೀಕ್ಷಿತ ಮಟ್ಟದಲ್ಲಿ ಆಸಕ್ತಿ ತೋರಿಸುತ್ತಿಲ್ಲ. ಆದುದರಿಂದ ರಾಜ್ಯ ಸರಕಾರ ದೃಢ ತೀರ್ಮಾನ ಕೈಗೊಂಡಿದೆ ಎಂದ ಅವರು, ರೈತರಿಂದ ಈರುಳ್ಳಿ ಖರೀದಿಸಲು ಮುಂದಾಗಿದೆ ಎಂದರು.
ಧಾರವಾಡ, ಗದಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಕೊಪ್ಪಳ, ಹಾವೇರಿ, ಬೆಳಗಾವಿ, ವಿಜಯಪುರ, ರಾಯಚೂರು ಸೇರಿದಂತೆ 3.50ಲಕ್ಷ ಎಕರೆ ಪ್ರದೇಶದಲ್ಲಿ 23 ಲಕ್ಷ ಮೆಟ್ರಿಕ್ ಟನ್‌ನಷ್ಟು ಈರುಳ್ಳಿ ಬೆಳೆಯಲಾಗಿರುವ ಖರೀದಿಸಿ ದಾಸ್ತಾನು ಮತ್ತು ರಫ್ತು ಮಾಡುವ ಸಂಬಂಧವೂ ಸಮಾಲೋಚನೆ ನಡೆಸಲಾಗುವುದು ಎಂದರು.
ನಿರ್ಧಾರವಿಲ್ಲ: ಯಡಿಯೂರಪ್ಪ ಪ್ರೇರಣಾ ಟ್ರಸ್ಟ್‌ಗೆ ದೇಣಿಗೆ ಪಡೆದ ಪ್ರಕರಣದಲ್ಲಿ ಖುಲಾಸೆಗೊಂಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಸಂಬಂಧ ರಾಜ್ಯ ಸರಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಆದರೆ, ದೂರುದಾರರು ಮೇಲ್ಮನವಿ ಸಲ್ಲಿಸುವ ಹೇಳಿಕೆ ನೀಡಿದ್ದಾರೆಂದು ಅವರು ಸ್ಪಷ್ಟಣೆ ನೀಡಿದರು.
ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಿದರೆ ರಾಜ್ಯದಲ್ಲಿ ಸಂಘರ್ಷ ಏರ್ಪಡುವ ಸಾಧ್ಯತೆಗಳಿವೆ ಎಂಬ ಗುಪ್ತಚರ ವರದಿ ಸಂಬಂಧ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಈ ಸಂಬಂಧ ಗೃಹ ಇಲಾಖೆ ನಿರ್ಧಾರ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.