×
Ad

ಕಂಬಳಕ್ಕೆಷರತ್ತುಬದ್ಧಅನುಮತಿ ನೀಡಿದ ಹೈಕೋರ್ಟ್

Update: 2016-10-29 00:08 IST

ಬೆಂಗಳೂರು, ಅ.28: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಗಳಲ್ಲಿ ಕಂಬಳ ಆಚರಣೆಗೆ ಹೈಕೋರ್ಟ್ ಷರತ್ತು ಬದ್ಧ ಅನುಮತಿ ನೀಡಿದೆ.ಈ ಸಂಬಂಧ ದಕ್ಷಿಣ ಕನ್ನಡ ಹಾಗೂ ಉಡುಪಿ ಕಂಬಳ ಜಿಲ್ಲಾ ಸಮಿತಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಬೋಪಣ್ಣ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.ರ್ ದಾರರ ಪರ ವಾದಿಸಿದ ವಕೀಲರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಂಬಳ ಹಬ್ಬದ ಆಚರಣೆ ಯನ್ನು 300 ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಈ ಕಂಬಳ ಹಬ್ಬದ ಆಚರಣೆಗೆ ಅನುಮತಿ ನೀಡಲು ನಿರಾಕರಿಸಿ ದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಕಂಬಳ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ನಿರಾಕರಿ ಸುವುದರಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಹೀಗಾಗಿ, ಈ ಕಂಬಳ ಹಬ್ಬದ ಆಚರಣೆಗೆ ಅನುಮತಿ ನೀಡಬೇಕೆಂದು ನ್ಯಾಯ ಪೀಠಕ್ಕೆ ಮನವಿ ಮಾಡಿದರು.ಕಂಬಳ ಹಬ್ಬದ ಆಚರಣೆಗೆ ಈಗಾಗಲೇ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಮಿತಿಯು ಎಲ್ಲ ರೀತಿಯ ಸಿದ್ಧತೆ ಗಳನ್ನು ಮಾಡಿಕೊಂಡಿದೆ. ಅಲ್ಲದೆ, ಈ ಕಂಬಳ ಹಬ್ಬದ ಸ್ಪರ್ಧೆ ಯಲ್ಲಿ ಗೆದ್ದವರಿಗೆ ಅವಾರ್ಡ್ ಹಾಗೂ ತೆಂಗಿನ ಸಸಿಯನ್ನು ನೀಡಿ ಗೌರವಿಸಲಾಗುತ್ತದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು 2015ನೆ ಸಾಲಿ ನಲ್ಲಿ ಕಂಬಳ ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ಹೊರಡಿಸಿ ರುವ ಆದೇಶಗಳನ್ನು ಪಾಲಿಸಬೇಕೆಂದು ಆದೇಶಿಸಿ ಕಂಬಳ ಆಚರಣೆಗೆ ಷರತ್ತು ಬದ್ಧ ಅನುಮತಿಯನ್ನು ನೀಡಿತು.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಂಬಳ ಹಬ್ಬದ ಆಚರಣೆಯನ್ನು 300 ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಈ ಕಂಬಳ ಹಬ್ಬದ ಆಚರಣೆಗೆ ಅನುಮತಿ ನೀಡಲು ನಿರಾಕರಿಸಿದ್ದಾರೆ.
 ಅರ್ಜಿದಾರ ಪರ ವಕೀಲರ ವಾದ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News