ವರ್ಗಾವಣೆ
Update: 2016-10-29 00:11 IST
ಬೆಂಗಳೂರು, ಅ.28: ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರನ್ನು ಸರಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.ರಾಜ್ಯ ಸರಕಾ ರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆಯಾಗಿದ್ದ ಜಿ.ಲತಾ ಕೃಷ್ಣರಾವ್ ಅವರನ್ನು ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣದ ಕಾರ್ಯದರ್ಶಿಯನ್ನಾಗಿ ನಿಯುಕ್ತಿಗೊಳಿಸಲಾಗಿದೆ.