×
Ad

ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ಮೃತ್ಯು

Update: 2016-10-29 10:17 IST

ಕೋಲಾರ, ಅ.29: ಕರ್ತವ್ಯನಿರತರಾಗಿದ್ದ ವೇಳೆಯೇ ಪೊಲೀಸ್ ಪೇದೆಯೊಬ್ಬರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಶ್ರೀನಿವಾಸಪುರದಲ್ಲಿ ನಿನ್ನೆ ರಾತ್ರಿ ನಡೆದಿದೆ.
ಸೀತಾರಾಮಪ್ಪ ಮೃತಪಟ್ಟ ಪೊಲೀಸ್ ಸಿಬ್ಬಂದಿ. ಅವರಿಗೆ 57 ವರ್ಷ ವಯಸ್ಸಾಗಿತ್ತು. ಶ್ರೀನಿವಾಸಪುರ ತಾಲೂಕಿನ ಗೌನಪಲ್ಲಿ ಎಂಬಲ್ಲಿನ ಪೊಲೀಸ್ ಠಾಣೆಯ ಮುಖ್ಯ ಪೇದೆಯಾಗಿದ್ದ ಇವರಿಗೆ ನಿನ್ನೆ ರಾತ್ರಿ ಕರ್ತವ್ಯದಲ್ಲಿದ್ದ ವೇಳೆ ಹೃದಯಾಘಾತ ಉಂಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News