×
Ad

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಕೇಂದ್ರಕ್ಕೆ ಬಿಎಸ್‌ವೈ ಮಾಹಿತಿ

Update: 2016-10-29 12:21 IST

ಬೆಂಗಳೂರು, ಅ.29: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
  ಶನಿವಾರ ಹೊಸದಿಲ್ಲಿಯಲ್ಲಿ ಕೇಂದ್ರ ಗೃಹ ಮಂತ್ರಿ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಕರ್ನಾಟಕದ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ಸಂಬಂಧ ಗೃಹ ಮಂತ್ರಿಯವರಿಗೆ ಮಾಹಿತಿ ನೀಡಿದ್ದಲ್ಲದೆ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News