ವಿಶ್ವಸಂಸ್ಥೆಯಲ್ಲಿ ದೀಪಾವಳಿ ಆಚರಣೆ
Update: 2016-10-30 18:29 IST
ವಿಶ್ವಸಂಸ್ಥೆ, ಅ.30: 2014ರಲ್ಲಿ ಮಾನ್ಯತೆ ದೊರಕಿದ ಬಳಿಕ ಇದೇ ಪ್ರಪ್ರಥಮ ಬಾರಿಗೆ ವಿಶ್ವಸಂಸ್ಥೆಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಗಿದೆ.
ಹ್ಯಾಪಿ ದಿವಾಳಿ. ವಿಶ್ವಸಂಸ್ಥೆಯಲ್ಲಿ ಪ್ರಪ್ರಥಮ ಬಾರಿಗೆ ದೀಪಾವಳಿಯನ್ನು ಆಚರಿಸಲಾಯಿತು. ಇದಕ್ಕಾಗಿ ವಿಶ್ವಸಂಸ್ಥೆಯ ಅಧ್ಯಕ್ಷರಿಗೆ ಧನ್ಯವಾದಗಳು . ವಿಶ್ವಸಂಸ್ಥೆಯಲ್ಲಿ ದೇಶವನ್ನು ಪ್ರತಿನಿಧಿಸುವುದು ನನ್ನ ಸುಯೋಗ ಮತ್ತು ನನಗೆ ದೊರೆತ ಗೌರವವಾಗಿದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿರುವ ಸಯ್ಯ್ ಅಕ್ಬರುದ್ದೀನ್ ಟ್ವೀಟ್ ಮಾಡಿದ್ದಾರೆ.
ಇದೇ ಮೊದಲ ಬಾರಿಗೆ ದೀಪಾವಳಿಯನ್ನು ಐಚ್ಛಿಕ ರಜೆ ಎಂದು ವಿಶ್ವಸಂಸ್ಥೆ ಘೋಷಿಸಿದ್ದು ವಿಶ್ವಸಂಸ್ಥೆಯ ನ್ಯೂಯಾರ್ಕ್ ಕಟ್ಟಡದಲ್ಲಿ ‘ಹ್ಯಾಪಿ ದಿವಾಲಿ’ ಎಂಬ ಸಂದೇಶವನ್ನು ಪ್ರದರ್ಶಿಸಲಾಗಿದೆ.