×
Ad

ಲಾರಿ-ಕಾರು ಢಿಕ್ಕಿ: ಮೂವರು ಸ್ಥಳದಲ್ಲಿಯೇ ಮೃತ್ಯು

Update: 2016-10-30 22:01 IST

ಶಿವಮೊಗ್ಗ, ಅ.30: ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಐಗಿನಬೈಲು ತಿರುವಿನಲ್ಲಿ ಸಂಭವಿಸಿದೆ. ಸಂತೋಷ್(32), ಸಂದೇಶ್(35) ಹಾಗೂ ಮಲ್ಲಿಕಾರ್ಜುನಗೌಡ (42) ಮೃತಪಟ್ಟವರೆಂದು ಗುರುತಿಸಲಾಗಿದೆ. ಮಹೇಶ್ (45) ಹಾಗೂ ಬಸವೇಶ್‌ಗೌಡ (65) ಗಂಭೀರವಾಗಿ ಗಾಯಗೊಂಡಿದ್ದು, ಇವರನ್ನು ಶಿವಮೊಗ್ಗದ ಸರಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯ ಚಾಲನೆಯೆ ಅವಘಡಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಲಾರಿ ಚಾಲಕನ ವಿರುದ್ಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಂದಿರುಗುತ್ತಿದ್ದರು: ಕೃಷಿ ಸಂಬಂಧಿತ ಯಂತ್ರ ಖರೀದಿಸಲು ಕಾರಿನಲ್ಲಿ ಐವರು ಶಿವಮೊಗ್ಗ ನಗರಕ್ಕೆ ಆಗಮಿಸಿದ್ದರು. ರಾತ್ರಿ ಕಾರಿನಲ್ಲಿ ಹಿಂದಿರುಗುವಾಗ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News