ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ಗೆ ರಾಜ್ಯೋತ್ಸವ ಗೌರವ

Update: 2016-10-31 06:09 GMT

ಮಂಗಳೂರು, ಅ.31: ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಗಣನೀಯ ಸಾಧನೆಗಾಗಿ ಸಾಧಕರಿಗೆ ದ.ಕ. ಜಿಲ್ಲಾಡಳಿತದಿಂದ ನೀಡಲಾಗುವ ಜಿಲ್ಲಾ ಪ್ರಶಸ್ತಿಗೆ ಈ ಬಾರಿ ಸಮಾಜಸೇವಾ ಸಂಸ್ಥೆ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಪಾತ್ರವಾಗಿದೆ.

ನವೆಂಬರ್ 1ರಂದು ಬೆಳಗ್ಗೆ ನಗರದ ನೆಹರೂ ಮೈದಾನದಲ್ಲಿ ನಡೆಯುವ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಂದರ್ಭ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‌ನ ಸಮಾಜ ಸೇವಾ ಚಟುವಟಿಕೆಗಳನ್ನು ಗುರುತಿಸಿ ಜಿಲ್ಲಾಡಳಿತವು ಈ ಗೌರವಕ್ಕೆ ‘ಟ್ಯಾಲೆಂಟ್’ ಅನ್ನು ಆಯ್ಕೆ ಮಾಡಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News