ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸದಂತೆ ಆಗ್ರಹ

Update: 2016-10-31 13:09 GMT

ಉಡುಪಿ, ಅ.31: ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಪ್ರಯತ್ನವನ್ನು ತಡೆಯುವಂತೆ ಆಗ್ರಹಿಸಿ ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ ಉಡುಪಿ ಜಿಲ್ಲಾ ಸಮಿತಿಯು ಇತ್ತೀಚೆಗೆ ಉಡುಪಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿತು.

 ಕೇಂದ್ರ ಸರಕಾರ ತ್ರಿವಳಿ ತಲಾಖ್‌ನ್ನು ಮುಂದಿಟ್ಟುಕೊಂಡು ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಲು ವ್ಯವಸ್ಥಿತ ಕಾರ್ಯತಂತ್ರ ರೂಪಿಸು ತ್ತಿರುವುದು ಖಂಡನೀಯ. ಮುಸ್ಲಿಮರ ವೈಯಕ್ತಿಕ ಕಾನೂನುಗಳೆಲ್ಲವೂ ಅಧೀನದಲ್ಲಿರುವ ಮುಸ್ಲಿಂ ಪರ್ಸನಲ್ ಲಾ ಬೋರ್ಡ್‌ನ್ನು ಸಂವಿಧಾನದಲ್ಲಿ ಅಳವಡಿಸಲಾಗಿದೆ. ಈ ವಿಚಾರದಲ್ಲಿ ಕೇಂದ್ರ ಸರಕಾರ ಮೂಗು ತೂರಿಸುವ ಕೆಲಸ ಮಾಡಬಾರದು ಎಂದು ಕೌನ್ಸಿಲ್ ಮನವಿಯಲ್ಲಿ ತಿಳಿಸಿದೆ.

ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿರುವಾಗ ತ್ರಿವಳಿ ತಲಾಖ್‌ನ್ನು ಬಹುದೊಡ್ಡ ಸಮಸ್ಯೆ ಎಂಬುದಾಗಿ ಬಿಂಬಿಸಿ ಮುಸ್ಲಿಮರ ಧಾರ್ಮಿಕ ಸ್ವಾತಂತ್ರವನ್ನು ಕಸಿ ಯುವ ಷಡ್ಯಂತ್ರ ಮಾಡಲಾಗುತ್ತಿದೆ. ಆದುದರಿಂದ ರಾಷ್ಟ್ರಪತಿಗಳು ಕೂಡಲೇ ಮಧ್ಯ ಪ್ರವೇಶಿಸಿ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿ ಸುವ ಪ್ರಯತ್ನಗಳನ್ನು ತಡೆಯಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

 ಈ ಸಂದರ್ಭದಲ್ಲಿ ಕೌನ್ಸಿಲ್‌ನ ಉಡುಪಿ ಜಿಲ್ಲಾಧ್ಯಕ್ಷ ವೌಲಾನ ಮಸೀವುಲ್ಲಾ ಖಾಸ್ಮಿ, ಪ್ರಧಾನ ಕಾರ್ಯದರ್ಶಿ ವೌಲಾನ ಜಾವೇದ್ ಖಾಸ್ಮಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News