ಮೈಸೂರು ವಿಭಾಗೀಯ ಮಟ್ಟದ ಯೋಗಾಸನ ಸ್ಪರ್ಧೆ : ಕಿನ್ನಿಗೋಳಿ ಲಿಟ್ಲ್ ಫ್ಲವರ್ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ
Update: 2016-10-31 21:13 IST
ಮುಲ್ಕಿ, ಅ.31: ಮೈಸೂರು ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಮೈಸೂರಿನಲ್ಲಿ ನಡೆದ ವಿಭಾಗೀಯ ಮಟ್ಟದ ಯೋಗಾಸನ ಸ್ಫರ್ಧೆಯಲ್ಲಿ ಕಿನ್ನಿಗೋಳಿ ಲಿಟ್ಲ್ ಫ್ಲವರ್ ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮೈಸೂರಿನಲ್ಲಿ ನಡೆದ ವಿಭಾಗೀಯ ಮಟ್ಟದ ಯೋಗಾಸನ ಸ್ಫರ್ಧೆಯಲ್ಲಿ ದ.ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಕಿನ್ನಿಗೋಳಿ ಲಿಟ್ಲ್ ಫ್ಲವರ್ ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಾದ ಅಂಜಲಿ ಚೌವ್ಹಾಣ್, ಶ್ರೇಯಾ, ಮೀಕ್ಷಾ ಎನ್. ಅಮೀನ್, ನಂದಿನಿ ಜೆ. ಕೋಟ್ಯಾನ್ ಪ್ರಶಸ್ತಿ ಪಡೆದು ಕೊಳ್ಳುವ ಮೂಲಕ ರಾಜ್ಯ ಪಟ್ಟಕ್ಕೆ ಆಯ್ಕೆಯಾಗಿದ್ದಾರೆ.