×
Ad

ಹಿರಿಯಡ್ಕದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣ: ಸೊರಕೆ

Update: 2016-10-31 22:02 IST

ಹಿರಿಯಡ್ಕ, ಅ.31: ಹಿರಿಯಡ್ಕದ ಜನತೆಯ ಬಹು ಕಾಲದ ಬೇಡಿಕೆ ಯಾಗಿರುವ ಹಿರಿಯಡ್ಕದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ರಚನೆಗೆ ಪ್ರಯತ್ನಿಸ ಲಾಗುವುದು ಎಂದು ಕಾಪು ಶಾಸಕ ವಿನಯ ಕುಮಾರ್ ಸೊರಕೆ ತಿಳಿಸಿದ್ದಾರೆ.

ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಕಾಂಗ್ರೆಸ್ ಸಭೆಯಲ್ಲಿ ಅವರು ಇತ್ತೀಚೆಗೆ ಮಾತನಾಡುತಿದ್ದರು. ಪಕ್ಷದ ಬೆನ್ನೆಲುಬು ಆಗಿ ರುವ ಕಾರ್ಯಕರ್ತರು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ಹೇಳಿದರು.

   ಹಿರಿಯಡ್ಕ ಜಿಲ್ಲಾ ಪಂಚಾಯತ್ ಸದಸ್ಯೆ ಚಂದ್ರಿಕಾ ಕೇಲ್ಕರ್, ತಾಲೂಕು ಪಂಚಾಯತ್ ಸದಸ್ಯ ಲಕ್ಷ್ಮೀ ನಾರಾಯಣ ಪ್ರಭು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಹೆಗ್ಡೆ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಮಾಲತಿ ಬಿ.ಆಚಾರ್ಯ, ಮಾಜಿ ಅಧ್ಯಕ್ಷ ಸುರೇಶ್ ನಾಯಕ್ ಬೊಮ್ಮರಬೆಟ್ಟು, ಗ್ರಾಪಂ ಉಪಾಧ್ಯಕ್ಷ ಚಂದ್ರಶೇಖರ್, ಉಡುಪಿ ಬ್ಲಾಕ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಮಹಾಬಲ ಕುಂದರ್ ಮಾತನಾಡಿದರು.

  ಸಭೆಯ ಅಧ್ಯಕ್ಷತೆಯನ್ನು ವಿನೋದ್ ಕುಮಾರ್ ವಹಿಸಿದ್ದರು. ಕಾಂಗ್ರೆಸ್ ಮುಖಂಡರಾದ ಭೋಜ ನಾಯ್ಕ, ಇಬ್ರಾಹಿಂ ಕುಟ್ಟಿ, ಭಾಸ್ಕರ್ ಪೂಜಾರಿ, ಸುಧಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಎಚ್.ಜಯವಂತ ರಾವ್ ಹಿರಿಯಡ್ಕ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News