ನ.6ಕ್ಕೆ ಉಡುಪಿ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ
Update: 2016-10-31 23:45 IST
ಉಡುಪಿ, ಅ.31: ಕರ್ನಾಟಕ ರಾಜ್ಯ ಉಪವಲಯ ಅರಣ್ಯಾಧಿ ಕಾರಿಗಳ ಸಂಘ ಉಡುಪಿ ಜಿಲ್ಲೆ ವತಿಯಿಂದ ನಡೆಯುವ 62ನೆ ವನ್ಯಜೀವಿ ಸಪ್ತಾಹದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವನ್ಯಜೀವಿ ಮತ್ತು ಪರಿಸರದ ಬಗ್ಗೆ ಚಿತ್ರ ಬಿಡಿಸುವ ಸ್ಪರ್ಧೆಯು ನ.6ರಂದು ಬೆಳಗ್ಗೆ 10ಕ್ಕೆೆ ಶ್ರೀಕೃಷ್ಣ ಮಠದ ಅನ್ನಬ್ರಹ್ಮ ಸಭಾಭವನದಲ್ಲಿ ನಡೆಯಲಿದೆ.
‘ವನ್ಯಜೀವಿ ಮತ್ತು ಪರಿಸರ’ ಸ್ಪರ್ಧೆಯ ವಿಷಯವಾಗಿದ್ದು, ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಮತ್ತು ಐದು ಸಮಾಧಾನಕರ ಬಹುಮಾನಗಳನ್ನು ನೀಡಲಾಗುವುದು ಎಂದು ಪ್ರಕಟನೆ ತಿಳಿಸಿದೆ.