×
Ad

ಚಿತ್ರದುರ್ಗ: ಬಿಜೆಪಿಯ ಒನಕೆ ಚಳವಳಿಗೆ ಪೊಲೀಸರಿಂದ ತಡೆ

Update: 2016-11-02 12:15 IST

ಚಿತ್ರದುರ್ಗ, ನ.2: ಟಿಪ್ಪು ಜಯಂತಿ ಆಚರಣೆ ಕಾರ್ಯಕ್ರಮವನ್ನು ವಿರೋಧಿಸಿ ಬಿಜೆಪಿಯು ಹಮ್ಮಿಕೊಂಡಿದ್ದ  ಒನಕೆ ಚಳವಳಿಗೆ ಪೊಲೀಸರು ತಡೆಯೊಡ್ಡಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ತಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಆಂಜನೇಯ, ಮಾರಕಾಸ್ತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಲು ಅವಕಾಶ ಇಲ್ಲ. ಇವತ್ತು ಒನಕೆ ತರುತ್ತಾರೆ, ನಾಳೆ ಬೇರೆ ಆಯುಧ ತರುತ್ತಾರೆ. ಇದರಿಂದ ಜನ ಜೀವನಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಅನುಮತಿ ನೀಡಿಲ್ಲ. ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡುತ್ತೇವೆ ಎಂದು ಹೇಳಿದರು.

ಸಂಸದ ಚಂದ್ರಪ್ಪ ಮಾತನಾಡಿ, ಪ್ರತಿಭಟನೆಗೆ ಅವಕಾಶ ಕೊಡೋದು ಬಿಡೋದು ಜಿಲ್ಲಾಡಳಿತದ ವಿವೇಚನೆಗೆ ಬಿಟ್ಟ ವಿಷಯ. ಆದರೆ ಪ್ರತಿಭಟನೆ ಶಾಂತಿಯುತವಾಗಿರಬೇಕು ಎಂದು ಹೇಳಿದರು.

ಈ ಬಗ್ಗೆ ಸಚಿವ ಆಂಜನೇಯ ಹಾಗೂ ಸಂಸದ ಚಂದ್ರಪ್ಪ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವರದಿ ನೀಡಿದ್ದಾರೆ ಎಂದು ತಿಳಿದುಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News