ಅಂತಾರಾಷ್ಟ್ರೀಯ ಕ್ವಿಜ್: ಆಳ್ವಾಸ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ
Update: 2016-11-02 15:38 IST
ಮೂಡುಬಿದಿರೆ, ನ.2: ಕ್ಯಾಡ್ ಸೆಂಟರ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೆಕ್ಯಾನಿಕಲ್ ಮತ್ತು ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಚೆನ್ನೈನಲ್ಲಿ ನಡೆದ ಕ್ವಿಜ್ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದಿದ್ದಾರೆ.
5ನೆ ಸೆಮಿಸ್ಟರ್ ವಿದ್ಯಾರ್ಥಿಗಳಾದ ಅಶ್ವಿನ್, ಅಶೋಕ್ ಪದ್ಮಶಾಲಿ, ಆಕಾಶ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ಎಂಟು ದೇಶಗಳ, 2,000 ಇಂಜಿನಿಯರಿಂಗ್ ಕಾಲೇಜುಗಳಿಂದ ಸುಮಾರು ಒಂದೂವರೆ ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕ್ಯಾಡ್ ಸೆಂಟರ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಸೆಲ್ವಾನ್ ಪ್ರಶಸ್ತಿ ವಿತರಿಸಿದರು.