91 ನಿಗಮ-ಮಂಡಳಿಗೆ ಅಧ್ಯಕ್ಷರ ನೇಮಕಾತಿ
Update: 2016-11-02 16:22 IST
ಬೆಂಗಳೂರು, ನ.2: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿವಿಧ 91 ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ 21 ಶಾಸಕರು ಹಾಗೂ 70 ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
ಮಾಲೀಕಯ್ಯ ಗುತ್ತೇದಾರ್, ರಾಜಶೇಖರ್ ಪಾಟೀಲ್, ಜಿಎಸ್ ಪಾಟೀಲ್ ಸೇರಿದಂತೆ 21 ಶಾಸಕರಿಗೆ ನಿಗಮ-ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ಕಲ್ಪಿಸಲಾಗಿದೆ.