×
Ad

ಭಾಸ್ಕರ್ ಶೆಟ್ಟಿ ಕೊಲೆ: ಆರೋಪಿಗಳಿಗೆ ನ್ಯಾಯಾಂಗ ಬಂಧನ

Update: 2016-11-02 21:13 IST

ಉಡುಪಿ, ನ.2: ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಮೂವರು ಪ್ರಮುಖ ಆರೋಪಿಗಳ ನ್ಯಾಯಾಂಗ ಬಂಧನವನ್ನು ಉಡುಪಿ ನ್ಯಾಯಾಲಯವು ಇಂದು ಮತ್ತೆ 14 ದಿನಗಳ ಕಾಲ ವಿಸ್ತರಿಸಿದೆ.

ಮಂಗಳೂರಿನ ಸಬ್‌ಜೈಲಿನಲ್ಲಿದ್ದ ಮೂವರು ಆರೋಪಿಗಳಾದ ರಾಜೇಶ್ವರಿ ಶೆಟ್ಟಿ, ನವನೀತ್ ಶೆಟ್ಟಿ, ನಿರಂಜನ್ ಭಟ್‌ನನ್ನು ಬೆಳಗ್ಗೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು. ಈ ಸಂದರ್ಭದಲ್ಲಿ ಸಿಐಡಿ ತನಿಖಾಧಿಕಾರಿ ಚಂದ್ರಶೇಖರ್ ಆರೋಪ ಪಟ್ಟಿ ಯನ್ನು ಸಲ್ಲಿಸಿದರು. ಈ ವೇಳೆ ಸಿಐಡಿ ಎಸ್ಪಿ ಏಡಾ ಮಾರ್ಟಿಸ್, ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ಹಾಜರಿದ್ದರು.

ಮಧ್ಯಾಹ್ನ ನಡೆದ ವಿಚಾರಣೆಯಲ್ಲಿ ಮೂವರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ನ.16ರವರೆಗೆ ವಿಸ್ತರಿಸಿ ನ್ಯಾಯಾಧೀಶ ರಾಜೇಶ್ ಕರ್ಣಂ ಆದೇಶ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News