×
Ad

ಟಿಪ್ಪು ಜಯಂತಿ : ಕರ್ನಾಟಕ ಹೈಕೋರ್ಟ್ ಹೇಳಿದ್ದೇನು ?

Update: 2016-11-02 21:51 IST

ಬೆಂಗಳೂರು, ನ.2: ಸ್ವಾತಂತ್ರ ಹೋರಾಟಗಾರನಲ್ಲದ ಟಿಪ್ಪು ಜಯಂತಿ ಆಚರಣೆ ಏಕೆ, ಅದರಿಂದ ಏನು ಪ್ರಯೋಜನ ಎಂದು ಸರಕಾರವನ್ನು ಹೈಕೋರ್ಟ್ ಬುಧವಾರ ಪ್ರಶ್ನಿಸಿದೆ.

ಈ ಸಂಬಂಧ ಟಿಪ್ಪು ಜಯಂತಿ ಆಚರಣೆ ಪ್ರಶ್ನಿಸಿ ಮಡಿಕೇರಿಯ ಮಂಜುನಾಥ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಬೂದಿಹಾಳ ಅವರಿದ್ದ ವಿಭಾಗೀಯ ನ್ಯಾಯಪೀಠ. ಜಯಂತಿ ಆಚರಣೆ ಏಕೆ, ಅದರಿಂದ ಏನು ಪ್ರಯೋಜನ ಎಂದು ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಅರ್ಜಿದಾರರ ಪರ ವಾದಿಸಿರುವ ವಕೀಲರು, ಕೊಡಗಿನಲ್ಲಿ ಟಿಪ್ಪು ಸುಲ್ತಾನ್ ಅವರ ಜಯಂತಿಯನ್ನು ಆಚರಿಸಿದರೆ ಶಾಂತಿಗೆ ಧಕ್ಕೆಯಾಗುತ್ತದೆ. ಹೀಗಾಗಿ, ಅವರ ಜಯಂತಿಯನ್ನು ಕೊಡಗಿನಲ್ಲಿ ಆಚರಿಸುವುದಕ್ಕೆ ತಡೆ ನೀಡಬೇಕೆಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಸರಕಾರದ ಪರ ವಕೀಲರು ವಾದಿಸಿ, ರಾಜ್ಯ ಸರಕಾರ ಟಿಪ್ಪು ಜಯಂತಿಯನ್ನು ರಾಜ್ಯಾದ್ಯಂತ ಆಚರಿಸಲು ತೀರ್ಮಾನಿಸಿದೆ. ಹಾಗಾಗಿ, ಕೊಡಗಿನಲ್ಲೂ ಟಿಪ್ಪು ಜಯಂತಿಯನ್ನು ಆಚರಿಸಲಾಗುತ್ತದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಟಿಪ್ಪು ಜಯಂತಿ ಆಚರಣೆ ಬಗ್ಗೆ ಪ್ರಶ್ನಿಸಿರುವ ಅಂಶಗಳನ್ನು ಸರಕಾರದ ಗಮನಕ್ಕೂ ತರಲಾಗುವುದು ಎಂದು ತಿಳಿಸಿದರು. ವಕೀಲರ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಪೀಠವು ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News