×
Ad

ನಝೀರ್ ಅಹ್ಮದ್ ಶೇಕ್‌ಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Update: 2016-11-02 22:09 IST

  ಬೆಂಗಳೂರು/ಕಾರವಾರ, ನ.2: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ನೀಡುವ ಕರ್ನಾಟಕದ ಅತ್ಯುನ್ನತ ಪ್ರಶಸ್ತಿಯಾದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಸಮಾಜ ಸೇವಕ ನಝೀರ್ ಅಹ್ಮದ್ ಯು. ಶೇಕ್ ಬೆಂಗಳೂರಿನಲ್ಲಿ ಸ್ವೀಕರಿಸಿದರು. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭಲ್ಲಿ ಸಮಾಜ ಸೇವಕ ನಝೀರ್ ಅಹ್ಮದ್ ಯು. ಶೇಕ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು.
 ಪ್ರಶಸ್ತಿಯು ಒಂದು ಲಕ್ಷ ರೂ. ನಗದು, 20 ಗ್ರಾಂ ಚಿನ್ನ ಹಾಗೂ ಪ್ರಮಾಣ ಪತ್ರವನ್ನು ಒಳಗೊಂಡಿದೆ. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಮಾಡಿದ ಒಟ್ಟು 60 ಸಾಧಕರಿಗೆ ಹಾಗೂ ಒಂದು ಸಂಘ ಸಂಸ್ಥೆಗೆ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು.

  
 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News