×
Ad

ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

Update: 2016-11-02 23:54 IST

ಕಾಸರಗೋಡು, ನ.2: ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭ ದೋಣಿಯಿಂದ ಸಮುದ್ರಕ್ಕೆ ಬಿದ್ದು ಬೆಸ್ತರೋರ್ವರು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ.  ಮೃತಪಟ್ಟವರನ್ನು ಕೀಯೂರಿನ ಕೆ. ವಿ. ದಾಸ್(56) ಎಂದು ಗುರುತಿಸಲಾಗಿದೆ. ಬುಧವಾರ ಕೀಯೂರು ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ನಿರತರಾಗಿದ್ದ ಸಂದರ್ಭ ಸಮುದ್ರಕ್ಕೆ ಬಿದ್ದು ಈ ಘಟನೆ ನಡೆದಿದೆ. ಜೊತೆಗಿದ್ದವರು ಶೋಧ ಮಾಡಿ ಅವರನ್ನು ಮೇಲಕ್ಕೆತ್ತಿ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಾಯಿಸಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News