ನ.6ರಂದು ‘ಕಾಡಂಕಲ್ಲ್ ಮನೆ’ ಕಾದಂಬರಿ ಬಿಡುಗಡೆ

Update: 2016-11-03 18:28 GMT

ಮಂಗಳೂರು, ನ.3: ಹಿರಿಯ ಲೇಖಕ ಮುಹಮ್ಮದ್ ಕುಳಾಯಿ ಅವರ ಕಾದಂಬರಿ ‘ಕಾಡಂಕಲ್ಲ್ ಮನೆ’ ಮಂಗಳೂರಿನ ಬಲ್ಮಠ ಜತ್ತನ್ನ ಆಡಿಟೋರಿಯಂ(ಸಹೋದಯದ ಬಳಿ)ನಲ್ಲಿ ನ.6ರಂದು ಸಂಜೆ 3 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಬಿಡುಗಡೆಯಾಗಲಿದೆ.


‘ಇರುವೆ ಪ್ರಕಾಶನ’ ಹೊರತಂದಿರುವ ಈ ಕೃತಿಯನ್ನು ಮಾಜಿ ಲೋಕಾಯುಕ್ತ ನ್ಯಾ.ಎನ್.ಸಂತೋಷ್ ಹೆಗ್ಡೆ ಬಿಡುಗಡೆ ಮಾಡಲಿದ್ದಾರೆ. ಹಿರಿಯ ರಾಜಕಾರಣಿ ಬಿ.ಎ.ಮೊಹಿದಿನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಖ್ಯಾತ ಲೇಖಕಿ ವೈದೇಹಿ, ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಕರ್ನಾಟಕ ಥಿಯೋಲಾಜಿಕಲ್ ಸೊಸೈಟಿ ಮಂಗಳೂರು ಇದರ ಪ್ರಾಂಶುಪಾಲ ಹನಿಕಬ್ರಾಲ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಸ್ಥಾಪಕಾಧ್ಯಕ್ಷ ಎಂ.ಬಿ.ಅಬ್ದುರ್ರಹ್ಮಾನ್, ಬ್ಯಾರೀಸ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಸೈಯದ್ ಮುಹಮ್ಮದ್ ಬ್ಯಾರಿ, ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಬಿ.ಎಂ.ಫಾರೂಕ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್, ಕೇಂದ್ರ ಬ್ಯಾರಿ ಸಾಹಿತ್ಯ ಪರಿಷತ್ ಸ್ಥಾಪಕಾಧ್ಯಕ್ಷ ಅಬ್ದುಲ್ ರಹೀಂ ಟೀಕೆ, ‘ಇನ್‌ಲ್ಯಾಂಡ್’ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಸಿರಾಜ್ ಅಹ್ಮದ್, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಅಧ್ಯಕ್ಷ ಅಬ್ದುರ್ರವೂಫ್ ಪುತ್ತಿಗೆ ಹಾಗೂ ಆಝಾದ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಮನ್ಸೂರ್ ಅಹ್ಮದ್ ಭಾಗವಹಿಸಲಿದ್ದಾರೆ.

ಪತ್ರಕರ್ತ, ಲೇಖಕ ಬಿ.ಎಂ.ಬಶೀರ್ ಕೃತಿ ಪರಿಚಯಿಸಲಿದ್ದಾರೆ. ಬಿ. ಎ. ಮುಹಮ್ಮದಲಿ ಕಾರ್ಯಕ್ರಮ ನಿರ್ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News