ಟ್ರ್ಯಾಕ್ಟರ್ ಗೆ ಬಸ್ ಢಿಕ್ಕಿ: ಟ್ರ್ಯಾಕ್ಟರ್ ಚಾಲಕನಿಗೆ ಗಾಯ
Update: 2016-11-04 10:10 IST
ಮಂಗಳೂರು, ನ.4: ಹೆದ್ದಾರಿಯಲ್ಲಿ ಕಾಮಗಾರಿ ನಿರತವಾಗಿದ್ದ ಟ್ರ್ಯಾಕ್ಟರೊಂದಕ್ಕೆ ಬಸ್ ಢಿಕ್ಕಿಯಾದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಬಳಿ ಸಂಭವಿಸಿದೆ.
ಹೆದ್ದಾರಿಯ ರಸ್ತೆ ವಿಭಜಕದಲ್ಲಿ ಗಿಡ ನೆಡುವ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿಯ ಹಿನ್ನೆಲೆಯಲ್ಲಿ ವಿಭಜಕದ ಪಕ್ಕ ಟ್ರ್ಯಾಕ್ಟರ್ ನ್ನು ನಿಲ್ಲಿಸಿ ಕಾರ್ಮಿಕರು ಗಿಡನೆಡುವ ಕೆಲಸ ನಿರ್ವಹಿಸುತ್ತಿದ್ದರು. ಈ ಸಂದರ್ಭ ಹಿಂದಿನಿಂದ ಬಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಗೆ ಢಿಕ್ಕಿ ಹೊಡೆದಿದೆ. ಈ ಸಂದರ್ಭ ಟ್ರಾಕ್ಟರ್ ಪಲ್ಟಿಯಾಗಿದ್ದು, ಟ್ರ್ಯಾಕ್ಟರ್ ಚಾಲಕ ಹನುಮಂತ ಎಂಬವರು ಗಾಯಗೊಂಡಿದ್ದಾರೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.